8 ವರ್ಷದ ಮಗ, ಪತ್ನಿಯನ್ನು ಹತ್ಯೆಗೈದು, ತಾನು ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಮುಂಬೈ: ಸಾಫ್ಟ್‌ವೇರ್ ಇಂಜಿನಿಯರ್ (Software Engineer) ವ್ಯಕ್ತಿಯೊಬ್ಬ ಪತ್ನಿ ಹಾಗೂ 8 ವರ್ಷದ ಮಗನನ್ನು ಹತ್ಯೆಗೈದು, ತಾನು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯ (Pune) ಔಂದ್ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಸಂದೀಪ್ತೋ ಗಂಗೂಲಿ (44), ಪ್ರಿಯಾಂಕಾ (40) ಹಾಗೂ ತನಿಷ್ಕಾ (8) ಎಂದು ಗುರುತಿಸಲಾಗಿದೆ. ಸಂದೀಪ್ತೋ ಹಾಗೂ ಪ್ರಿಯಾಂಕ್‍ನಿಗೆ ಎಷ್ಟೇ ಕರೆ ಮಾಡಿದರೂ ಸ್ವೀಕರಿಸಿದಿದ್ದನ್ನು ಗಮನಿಸಿದ ಬೆಂಗಳೂರಿನಲ್ಲಿ (Bengaluru) ವಾಸಿಸುತ್ತಿದ್ದ ಆತನ ಸಹೋದರ ಆತನ ಸ್ನೇಹಿತರಿಗೆ ತಿಳಿಸಿದ್ದಾನೆ. ಸ್ನೇಹಿತರು ಸಂದೀಪ್ತೋ ಮನೆಗೆ ಭೇಟಿ ನೀಡಿದ್ದಾಗ ಫ್ಲ್ಯಾಟ್‍ಗೆ ಬೀಗ ಹಾಕಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಂದೀಪ್ತೋ ಸಹೋದರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸಂದೀಪ್ತೋ ಹಾಗೂ ಆತನ ಕುಟುಂಬಸ್ಥರು ನಾಪತ್ತೆ ಆಗಿದ್ದಾರೆ ಎಂದು ದೂರು ದಾಖಲಿಸಿದ್ದಾನೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿಯ ಮೊಬೈಲ್ ಫೋನ್‍ಗಳನ್ನು ಟ್ರ್ಯಾಕ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಮೊಬೈಲ್ ಫ್ಲ್ಯಾಟ್‍ನಲ್ಲಿ ಇರುವುದು ಪತ್ತೆ ಆಗಿದೆ. ಈ ಹಿನ್ನೆಲೆಯಲ್ಲಿ ನಕಲಿ ಕೀ ಬಳಸಿ ಫ್ಲ್ಯಾಟ್‍ನೊಳಗೆ ಹೋಗಿದ್ದಾರೆ. ಈ ವೇಳೆ ಸುದೀಪ್ನೋ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತ್ನಿ ಹಾಗೂ ಮಗುವಿನ ಮುಖಕ್ಕೆ ಪಾಲಿಥಿನ್‍ನನ್ನು ಸುತ್ತಿ ಹತ್ಯೆ ಮಾಡಿರುವುದು ಕಂಡುಬಂದಿದೆ. ಇದನ್ನೂ ಓದಿ: ಬೇಳೂರು ರಾಘವೇಂದ್ರ ಶೆಟ್ಟಿ ಮನೆ ಹರಾಜು – ಸೆಕ್ಯುರಿಟಿ ಗಾರ್ಡ್ ಕಣ್ತಪ್ಪಿಸಿ ಅಕ್ರಮ ಪ್ರವೇಶ

ಇನ್ನೂ ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್‍ಗಳು ಪತ್ತೆಯಾಗಿಲ್ಲ. ಅಷ್ಟೇ ಅಲ್ಲದೇ ಸುದೀಪ್ತೋ ತನ್ನ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಸಾಫ್ಟ್‌ವೇರ್ ಕಂಪನಿಯ ಉದ್ಯೋಗವನ್ನು ತೊರೆದಿದ್ದ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆತ್ತಲೆಯಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ ಪೊಲೀಸರ ವಶಕ್ಕೆ

Comments

Leave a Reply

Your email address will not be published. Required fields are marked *