ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್ – ಪುನೀತ್ ಖದರ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ.

ಪುನೀತ್ ರಾಜ್‍ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಪೋಸ್ಟರ್ ಅನ್ನು ಗಣರಾಜ್ಯೋತ್ಸವದಂದು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಅದರಂತೆ ಇಂದು ಜೇಮ್ಸ್ ಸಿನಿಮಾದ ಪೋಸ್ಟರ್ ಬಿಡುಗಡೆಗೊಂಡಿದ್ದು, ಅಶ್ವಿನಿ ಪುನೀತ್ ರಾಜ್‍ಕುಮಾರ್, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಪುನೀತ್ ಗನ್ ಹಿಡಿದು ಖಡಕ್ ಆರ್ಮಿ ಆಫೀಸರ್ ಆಗಿ ಮಿಂಚಿದ್ದಾರೆ. ಅದರಲ್ಲಿಯೂ ಪೋಸ್ಟರ್‌ನಲ್ಲಿರುವ ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್ ಎಂಬ ಸಾಲುಗಳು ಎಲ್ಲರ ಗಮನ ಸೆಳೆಯುತ್ತಿದೆ.

ಪೋಸ್ಟರ್ ಜೊತೆಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಆ್ಯಕ್ಷನ್ ಕಮರ್ಷಿಯಲ್ ಜೇಮ್ಸ್ ಸಿನಿಮಾವಾಗಿದ್ದು, ಚಿತ್ರದ ಶೂಟಿಂಗ್ ಇದೀಗ ಕಂಪ್ಲೀಟ್ ಆಗಿದೆ. ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು ಗ್ರಾಫಿಕ್ಸ್ ಮಾಡಲಾಗಿದೆ. ಇದನ್ನೂ ಓದಿ:  ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ, ಮನವಿ ಮೊದಲಿನಂತೆಯೇ ಇರಲಿದೆ: ಅನುಷ್ಕಾ ಶರ್ಮಾ

 

View this post on Instagram

 

A post shared by DrShivaRajkumar (@nimmashivarajkumar)

ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದು, ಅಪ್ಪು ಹುಟ್ಟುಹಬ್ಬದ ದಿನದಂದೇ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ರಾಜಕುಮಾರ ಸಿನಿಮಾದಲ್ಲಿ ನಟಿಸಿದ್ದ ಪ್ರಿಯಾ ಆನಂದ್ ಅವರೇ ಜೇಮ್ಸ್ ಚಿತ್ರದಲ್ಲಿ ಅಪ್ಪು ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಚಿತ್ರದಲ್ಲಿ ಶ್ರೀಕಾಂತ್, ಆದಿತ್ಯ ಮೆನನ್ ಹಾಗೂ ಅನು ಪ್ರಭಾಕರ್, ಮುಖೇಶ್ ರಿಷಿ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ.

ಪುನೀತ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಆಗಿದ್ದು, ಈಗಾಗಲೇ ಪ್ರೇಕ್ಷಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಿದ್ದು, ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಯಶ್, ಅಲ್ಲು ಅರ್ಜುನ್ ಬಾಲಿವುಡ್‍ನಿಂದ ಭ್ರಷ್ಟರಾಗಬೇಡಿ: ಕಂಗನಾ ರಣಾವತ್

Comments

Leave a Reply

Your email address will not be published. Required fields are marked *