ಹೆಚ್‌ಡಿಕೆಗೆ ಕರಿಯ ಎಂದಿದ್ದ ಜಮೀರ್‌ಗೆ ಜೀವ ಬೆದರಿಕೆ – ಪುನೀತ್‌ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಗೆ (Puneeth Kerehalli) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುನೀತ್‌ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಯಿತು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹಕ್ಕೆ ಮುಂದಾದ ಸರ್ಕಾರ

ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕರಿಯ ಎಂದು ಜಮೀರ್‌ ಅಹ್ಮದ್‌ (Zameer Ahmed) ನಿಂದಿಸಿದ್ದರು. ಇದೇ ಹೇಳಿಕೆಯನ್ನು ಮುಂದಿಟ್ಟು ಫೇಸ್‌ಬುಕ್‌ ಲೈವ್‌ನಲ್ಲಿ ಜಮೀರ್‌ ವಿರುದ್ಧ ಪುನೀತ್‌ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಜೊತೆಗೆ ಸಚಿವರಿಗೆ ಬೆದರಿಕೆ ಹಾಕಿದ್ದ.

‘ಕುಮಾರಸ್ವಾಮಿ (H.D.Kumaraswamy) ಅವರಿಗೆ ಮತ್ತೊಮ್ಮೆ ಕರಿಯ ಎಂದು ಕರೆದರೆ ನೀನು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಗಡಿ ದಾಟುವುದಿಲ್ಲ. ನಾನೇ ನಿನಗೆ ಕೊನೆಯಾಡುತ್ತೇನೆ’ ಎಂದು ಸಚಿವ ಜಮೀರ್‌ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ. ಈ ಸಂಬಂಧ ಸಚಿವರ ಆಪ್ತ ಸಹಾಯ ಬಿ.ಎಸ್‌.ಅಶೋಕ್‌ ಅವರು ದೂರು ನೀಡಿದ್ದರು. ದೂರಿನ ಮೇರೆಗೆ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು