ಅಪ್ಪು ಅಂತಿಮ ದರ್ಶನ ಪಡೆದು ತೆರಳಿದ್ದ ನಂದಮುರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

ಹೈದರಾಬಾದ್: ನಟ ಪುನೀತ್ ರಾಜ್‍ಕುಮಾರ್ ಅಂತಿಮ ದರ್ಶನ ಪಡೆದು ತೆರಳಿದ್ದ ಟಾಲಿವುಡ್ ನಟ ನಂದಮುರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೈದರಾಬಾದ್‍ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಆರು ತಿಂಗಳಿಂದ ಬಾಲಯ್ಯ ಅವರಿಗೆ ಭುಜದ ನೋವು ಅತಿಯಾಗಿ ಕಾಡುತ್ತಿತ್ತು. ಈ ಕಾರಣಕ್ಕೆ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿತ್ತು. ಆದರೆ ಆಪರೇಷನ್ ಮಾಡಿಸಿಕೊಂಡರೆ ಅವರು ವಿಶ್ರಾಂತಿ ಪಡೆಯಬೇಕು. ಹೀಗೆ ಮಾಡಿದರೆ, ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಬೇಕಾಗುತ್ತದೆ. ಹೀಗಾಗಿ ಅವರು ಇದನ್ನು ಮುಂದೂಡುತ್ತಲೇ ಬರುತ್ತಿದ್ದರು. ಇದನ್ನೂ ಓದಿ: ಪಂಜಾಬ್ ಲೋಕ್ ಕಾಂಗ್ರೆಸ್ -ಅಮರಿಂದರ್ ಸಿಂಗ್ ಹೊಸ ಪಕ್ಷ

ಇಂದು ಬಾಲಕೃಷ್ಣ ಅವರಿಗೆ ತೀವ್ರವಾಗಿ ಭುಜದ ನೋವು ಬಂದಿತ್ತು. ಇದರಿಂದ ಅವರು ಕೈ ಎತ್ತಲೂ ಆಗದ ಪರಿಸ್ಥಿತಿ ಬಂದೊದಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಾಲ್ಕು ಗಂಟೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಡಾ. ಬಿಎನ್ ಪ್ರಸಾದ್ ಅವರು ಇದರ ನೇತೃತ್ವ ವಹಿಸಿಕೊಂಡಿದ್ದರು. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

Puneeth Rajkumar Special Vehicle 5

ಈ ಆಪರೇಷನ್ ಯಶಸ್ವಿ ಆಗಿದೆ. ಬಾಲಕೃಷ್ಣ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಅವರು ಆರೋಗ್ಯಯುತವಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ. ಅವರು ಕೆಲ ಕಾಲ ವಿಶ್ರಾಂತಿ ಪಡೆಯಬೇಕಿದೆ ಎಂದು ಹೇಳಿದ್ದಾರೆ.

ಪುನೀತ್‍ರಾಜ್‍ಕುಮಾರ್ ಅವರು ನಿಧನವಾದ ವಿಚಾರವನ್ನು ತಿಳಿದು ಬೆಂಗಳೂರಿಗೆ ಬಂದು ಅಂತಿಮ ನಮನ ಸಲ್ಲಿಸಿದ್ದರು. ಪುನೀತ್ ಅವರ ಪಾರ್ಥಿವ ಶರೀರವನ್ನು ನೋಡುತ್ತಾ ಕಣ್ಣೀರಿಟ್ಟಿದ್ದರು.

Comments

Leave a Reply

Your email address will not be published. Required fields are marked *