ನಾಯಕತ್ವ ಬದಲಾವಣೆಗೆ ಮುಂದಾದ ಕಾಂಗ್ರೆಸ್- ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ?

ಚಂಡೀಗಢ: ಪಂಜಾಬ್‍ನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಹಲವು ದಿನಗಳಿಂದ ಎದ್ದಿದ್ದ ಬಂಡಾಯ ಇದೀಗ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ ಕೊಡುವ ಮಟ್ಟಕ್ಕೆ ಬಂದು ನಿಂತಿದೆ. ರಾಜಕೀಯ ಬೆಳವಣಿಗೆಯ ಮಧ್ಯೆ ಇಂದು ಅಮರೀಂದರ್ ಸಿಂಗ್ ರಾಜೀನಾಮೆ ಕೊಡುವ ಸಾಧ್ಯತೆ ಬಗ್ಗೆ ವರದಿಯಾಗಿದೆ.

ಅಮರೀಂದರ್ ಸಿಂಗ್‍ರನ್ನು ಬದಲಾಯಿಸುವಂತೆ ಅನೇಕ ಶಾಸಕರು ಹೈಕಮಾಂಡ್‍ಗೆ ಒತ್ತಡ ಹೇರಿರುವ ಪರಿಣಾಮ ಹೈಕಮಾಂಡ್ ರಾಜೀನಾಮೆ ನೀಡಲು ತಿಳಿಸಿದೆ ಎಂದು ಮಾಹಿತಿ ಇದ್ದು, ಈ ಮೂಲಕ ಬಿಜೆಪಿ ಹಾದಿಯನ್ನೇ ಕಾಂಗ್ರೆಸ್ ಪಕ್ಷ ಕೂಡ ಹಿಡಿದಂತಿದೆ. ಕೆಲದಿನಗಳ ಹಿಂದೆ ಬಿಜೆಪಿ, ಕರ್ನಾಟಕ, ಗುಜಾರಾತ್ ಸೇರಿದಂತೆ ಕೆಲ ರಾಜ್ಯಗಳ ಮುಖ್ಯಮಂತ್ರಿಗಳ ಬದಲಾವಣೆ ಮಾಡಿದೆ. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‍ನಲ್ಲಿ ಭಿನ್ನಮತ – ಸತ್ಯಕ್ಕೆ ಸೋಲಿಲ್ಲ ಎಂದ ನವಜೋತ್ ಸಿಂಗ್ ಸಿಧು

ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದಾರೆ. 2017 ರ ವಿಧಾನಸಭೆ ಚುನಾವಣೆಗೂ ಮುನ್ನ ಅಮರೀಂದರ್ ಸಿಂಗ್ ನೀಡಿದ್ದ ಭರವಸೆಗಳು ರಾಜ್ಯದಲ್ಲಿ ಈಡೇರದೆ ಇರುವುದೇ ಬಂಡಾಯಕ್ಕೆ ಪ್ರಮುಖ ಕಾರಣವಾಗಿದ್ದು, ಅಮರಿಂದರ್ ನಾಯಕತ್ವದಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ಸಚಿವರು ಮತ್ತು ಶಾಸಕರು ಹೈಕಮಾಂಡ್‍ಗೆ ದೂರು ನೀಡಿದ್ದರು ಎಂದು ಈ ಹಿಂದೆ ಆರೋಪ ಕೇಳಿ ಬಂದಿತ್ತು.

ಕೆಲ ತಿಂಗಳ ಹಿಂದೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಸಿಎಂ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ್ದರು. ಈ ಸಂದರ್ಭ ಅಮರೀಂದರ್ ಸಿಂಗ್ ವಿರುದ್ಧ 24ಕ್ಕೂ ಹೆಚ್ಚು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ನನ್ನನ್ನು ತೆಗೆದು ಸಿಎಂ ಆಗಲು ಸಿಧು ಪ್ರಯತ್ನ: ಅಮರೀಂದರ್ ಸಿಂಗ್

Comments

Leave a Reply

Your email address will not be published. Required fields are marked *