ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ

ನವದೆಹಲಿ: ಉತ್ತರ ಪ್ರದೇಶದ 16 ಜಿಲ್ಲೆಗಳ 59 ಕ್ಷೇತ್ರಗಳಿಗೆ ಇಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ನಲ್ಲೂ ಇಂದು ಒಂದೇ ಹಂತದಲ್ಲಿ ಮತದಾನವಾಗಲಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ನಡೆಯಲಿದೆ.

ಉತ್ತರಪ್ರದೇಶದಲ್ಲಿ 2.15 ಕೋಟಿ ಮತದಾರರು 3ನೇ ಹಂತದಲ್ಲಿ 627 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರಕ್ಕೂ ಇಂದೇ ಮತದಾನ ನಡೆಯುತ್ತಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಭವಿಷ್ಯವೂ ನಿರ್ಧಾರವಾಗಲಿದೆ.

ಉತ್ತರಪ್ರದೇಶದ ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್‌ಪುರಿ, ಫರೂಕಾಬಾದ್, ಕನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್, ಜಲೌನ್, ಝಾನ್ಸಿ, ಲಲಿತ್‌ಪುರ, ಹಮೀರ್‌ಪುರ್ ಮತ್ತು ಮಹೋಬಾ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.

ಈಗಾಗಲೇ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಸಹೋದರ ಅಭಯ್ ರಾಮ್ ಯಾದವ್ ಇಟಾವಾ ಜಿಲ್ಲೆಯ ಸೈಫೈನಲ್ಲಿ ಈಗಾಗಲೇ ಮತ ಚಲಾಯಿಸಿದರು. ಇದನ್ನೂ ಓದಿ:  ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲು!

ಪಂಜಾಬ್‌ನಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, 93 ಮಹಿಳೆಯರು ಸೇರಿದಂತೆ 1,304 ಅಭ್ಯರ್ಥಿಗಳ ಭವಿಷ್ಯವನ್ನು 2.14 ಕೋಟಿ ಮತದಾರರು ನಿರ್ಧರಿಸಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ. ಪಂಜಾಬ್‌ನ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಭಗವಂತ್ ಮಾನ್, ಮಾಜಿ ಸಿಎಂಗಳಾದ ಅಮರಿಂದರ್ ಸಿಂಗ್ ಮತ್ತು ಪ್ರಕಾಶ್ ಸಿಂಗ್ ಬಾದಲ್ ಮತ್ತು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರ ಭವಿಷ್ಯವೂ ಇಂದೇ ನಿರ್ಧಾರವಾಗಲಿದೆ. ಇದನ್ನೂ ಓದಿ: ದೇಶದ ಮೊದಲ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳು ಮೋದಿ ಸರ್ಕಾರದಿಂದ ಪೂರ್ಣ: ಅಮಿತ್ ಶಾ

bjp - congress

2017ರ ಚುನಾವಣೆಯಲ್ಲಿ, ಬಿಜೆಪಿಯು ಈ 59 ಸ್ಥಾನಗಳಲ್ಲಿ 49 ಸ್ಥಾನಗಳನ್ನು ಗೆದ್ದಿದ್ದರೆ, ಸಮಾಜವಾದಿ ಪಕ್ಷ 9 ಸ್ಥಾನ ಹಾಗೂ ಕಾಂಗ್ರೆಸ್ 1 ಸ್ಥಾನ ಪಡೆದಿತ್ತು. ಆದರೆ ಬಹುಜನ ಸಮಾಜವಾದಿ ಪಕ್ಷವೂ ಈ ಕ್ಷೇತ್ರಗಳಲ್ಲಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ.

Comments

Leave a Reply

Your email address will not be published. Required fields are marked *