ರಶ್ಮಿಕಾ ಮಂದಣ್ಣ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗಲಿದೆ ಗುಡ್ ನ್ಯೂಸ್

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಇದೇ ಏ.5ರಂದು ತಮ್ಮ 28ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ತಮ್ಮ ಬರ್ತ್‌ಡೇ (Birthday) ದಿನವೇ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್ ಸಿಗಲಿದೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಪುಷ್ಪ ಬೆಡಗಿಯ ಸಿನಿಮಾ ಅಪ್‌ಡೇಟ್ ಸಿಗಲಿದೆ.

ಕನ್ನಡತಿ ರಶ್ಮಿಕಾ ಮಂದಣ್ಣ ತಮ್ಮ ಜನ್ಮದಿನದಂದು ತಾವು ಅಭಿನಯಿಸುತ್ತಿರುವ ಬಹುನಿರೀಕ್ಷಿತ ‘ದಿ ಗರ್ಲ್‌ಫ್ರೆಂಡ್’ (The Girlfriend) ಚಿತ್ರದ ಮೊದಲ ಟೀಸರ್ ರಿಲೀಸ್ ಆಗಲಿದೆ. ಈ ಚಿತ್ರದ ಕಥೆ ಏನು? ಇದು ಎಂತಹ ಸಿನಿಮಾ, ಇದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾಡುತ್ತಿರುವ ಪಾತ್ರವಾದರೂ ಯಾವುದು ಎಂಬ ಕುತೂಹಲಕ್ಕೆ ಉತ್ತರ ಚಿತ್ರದ ಟೀಸರ್ ಮೂಲಕ ಸಿಗಲಿದೆ. ಈ ಸಿನಿಮಾ ಬಹುಭಾಷೆಗಳಲ್ಲಿ ತೆರೆಗೆ ಬರಲಿದೆ. ಎಲ್ಲಾ ಭಾಷೆಗಳಲ್ಲೂ ನಟಿ ರಶ್ಮಿಕಾನೇ ಧ್ವನಿ ನೀಡಿರೋದು ಮತ್ತೊಂದು ಹೈಲೆಟ್ ಆಗಿದೆ.

‘ದಿ ಗರ್ಲ್‌ಫ್ರೆಂಡ್’ ಸಿನಿಮಾ ಒಂದೇ ಅಲ್ಲ, ಇದರ ಜೊತೆಗೆ ಹೊಸ ಸಿನಿಮಾ ಅನೌನ್ಸ್ ಕೂಡ ಆಗಲಿದೆ. ಈ ವರ್ಷ ಏನೆಲ್ಲಾ ಅಪ್‌ಡೇಟ್ ಸಿಗಲಿದೆ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ:ನಟಿ ಅನುಶ್ರೀ ಜೊತೆಗಿನ ಡೇಟಿಂಗ್ ಬಗ್ಗೆ ಉನ್ನಿ ಮುಕುಂದನ್ ಪ್ರತಿಕ್ರಿಯೆ

ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ಸಿನಿಮಾದಿಂದ ಸಿನಿಮಾ ಕೆರಿಯರ್ ಶುರು ಮಾಡಿ, ಈಗ ತೆಲುಗು, ತಮಿಳು, ಮಲಯಾಳಂ ಮತ್ತು ಬಾಲಿವುಡ್‌ನಲ್ಲೂ ಗುರುತಿಸಿಕೊಂಡಿರುವ ರಶ್ಮಿಕಾ ಮಂದಣ್ಣಗೆ ಅಪಾರ ಅಭಿಮಾನಿಗಳ ಬಳಗವಿದೆ. ಪ್ರತಿಷ್ಠಿತ ಜಾಹೀರಾತುಗಳಿಗೆ ರಶ್ಮಿಕಾನೇ ಬೇಕು ಅನ್ನುವ ಮಟ್ಟಿಗೆ ಕೊಡಗಿನ ಕುವರಿಗೆ ಬೇಡಿಕೆ ಸೃಷ್ಟಿಯಾಗಿದೆ.

ಸದ್ಯ ಪುಷ್ಪ 2, ಅನಿಮಲ್ ಪಾರ್ಕ್, ರೈನ್‌ಬೋ, ದಿ ಗರ್ಲ್‌ಫ್ರೆಂಡ್, ಚಾವಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ.