ಕ್ವಾರಂಟೈನ್ ವಾರ್ಡ್‍ನಲ್ಲಿಯೇ ಆತ್ಮಹತ್ಯೆಗೆ ಶರಣು

ಲಕ್ನೋ: ಕೊರೊನಾ ಸೋಂಕು ಶಂಕಿತ ವ್ಯಕ್ತಿಯೋರ್ವ ಆಸ್ಪತ್ರೆಯ ಕ್ವಾರಂಟೈನ್ ವಾರ್ಡಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯನ್ನು ಶಾಮ್ಲಿಯ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗುತ್ತಿತ್ತು. ಇಂದು ಸೋಂಕು ಶಂಕಿತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಾಗಲೇ ಆತನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬರಬೇಕಿದೆ. ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಸ್ಜಿತ್ ಕೌರ್ ಮಾಹಿತಿ ನೀಡಿದ್ದಾರೆ.

ಬುಧವಾರ ಉತ್ತರ ಪ್ರದೇಶದಲ್ಲಿ ಕೊರೊನಾಗೆ ಮೊದಲ ವ್ಯಕ್ತಿ ಸಾವನ್ನಪ್ಪಿದ್ದರು. ದೆಹಲಿಯ ಜಮಾತ್ ನಲ್ಲಿ ಭಾಗಿಯಾಗಿದ್ದ 104 ಜನರನ್ನು ಉತ್ತರ ಪ್ರದೇಶದ ಹೋಟೆಲ್ ಗಳಲ್ಲಿರಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ. ಎಲ್ಲರ ಗಂಟಲಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

Comments

Leave a Reply

Your email address will not be published. Required fields are marked *