‘ಬಿಂಗೋ’ ಚಿತ್ರದ ಡಬಲ್ ಶೇಡ್ ಪಾತ್ರದಲ್ಲಿ ರಾಗಿಣಿ ದ್ವಿವೇದಿ

ಶಂಭೋ ಶಿವ ಶಂಕರ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ (Shankar Konamanahalli) ಇದೀಗ ಮತ್ತೊಂದು ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರಕ್ಕೆ ‘ಬಿಂಗೋ’ (Bingo) ಎಂದು ಹೆಸರಿಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಆರ್ ಕೆ ಚಂದನ್ (R.K.Chandan) ನಟಿಸುತ್ತಿದ್ದಾರೆ.

ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಗಿಸಿರುವ “ಬಿಂಗೋ ಚಿತ್ರಕ್ಕೆ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ನಗರದ ಹೊರವಲಯದಲ್ಲಿರುವ ದೇವರಾಜ್ ಎಸ್ಟೇಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಬಹುತೇಕ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಬ್ಯಾಕ್‌ಲೆಸ್ ಫೋಟೋ ಶೇರ್‌, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ `ಸಲಾರ್’ ನಟಿ

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ (ನಾಯಕ) , ರಕ್ಷಾ ನಿಂಬರ್ಗಿ (ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್ ಗಳಲ್ಲಿ ಅವರ ಪಾತ್ರವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಹಿತನ್ ಹಾಸನ್ ಸಂಗೀತ ನಿರ್ದೇಶನವಿರುವ  “ಬಿಂಗೋ” ಚಿತ್ರಕ್ಕೆ  ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿದೆ.

Comments

Leave a Reply

Your email address will not be published. Required fields are marked *