ಕೈ ಕೊಟ್ಟ ರಾಗಿಣಿ – ಬಿಜೆಪಿ ಸೇರ್ಪಡೆ ಕಾರ್ಯಕ್ರಮ ದಿಢೀರ್ ರದ್ದು

ಬೆಂಗಳೂರು: ಚಲನಚಿತ್ರ ನಟಿ, ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ದಿಢೀರ್ ರದ್ದಾಗಿದೆ. ಹೀಗಾಗಿ ರಾಗಿಣಿ ಬಿಜೆಪಿಗೆ ಕೈಕೊಟ್ಟರಾ ಎನ್ನುವ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ನಟಿ ರಾಗಿಣಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿತ್ತು. ಈ ನಿಟ್ಟಿನಲ್ಲಿ ಇಂದು ಮಧ್ಯಾಹ್ನ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ ಅಶ್ವಥ್ ನಾರಾಯಣ್ ಅವರು ಒಂದು ಗಂಟೆ ಕಾದರೂ ರಾಗಿಣಿ ದ್ವಿವೇದಿ ಕಚೇರಿಗೆ ಆಗಮಿಸಲಿಲ್ಲ. ಇದರಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ನಮ್ಮ ನಾಯಕರಾದ ಅರವಿಂದ ಲಿಂಬಾವಳಿ ಅವರು ತುರ್ತಾಗಿ ಚಾಮರಾಜನಗರ ಪ್ರವಾಸ ಕೈಗೊಂಡಿದ್ದಾರೆ. ಮುರಳೀಧರ್ ರಾವ್ ಕೂಡ ಲಭ್ಯವಿಲ್ಲ. ಹೀಗಾಗಿ ಇಂದು ನಿಗದಿಯಾಗಿದ್ದ ಸೇರ್ಪಡೆ ಕಾರ್ಯಕ್ರಮ ರದ್ದಾಗಿದೆ. ರಾಗಿಣಿ ಅವರನ್ನು ಕಾಂಗ್ರೆಸ್‍ನವರು ಸೆಳೆದಿದ್ದಾರೆ ಎನ್ನುವುದು ಊಹಾಪೋಹದ ಸುದ್ದಿ ಎಂದು ಬಿಜೆಪಿ ವಕ್ತಾರ ಪ್ರಕಾಶ್ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *