ರಾಹುಲ್ ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿ ಹೌದೋ, ಅಲ್ಲವೋ ಎನ್ನುವುದು ಕೈ ನಾಯಕರಲ್ಲಿಯೇ ಭಾರೀ ಚರ್ಚೆಯಾಗುತ್ತಿದೆ. ನಮ್ಮ ಪಕ್ಷದ ಅಧ್ಯಕ್ಷರೇ ಪ್ರಧಾನಿ ಅಭ್ಯರ್ಥಿ ಆಗುತ್ತಾರೆ ಎನ್ನುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಾಜಿ ಸಚಿವ ಪಿ.ಚಿದಂಬರಂ ಹೇಳಿಕೆ ವೈಯಕ್ತಿಕವಾದದ್ದು, ಅವರು ಯಾವ ಸಂದರ್ಭದಲ್ಲಿ ಮತ್ತು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ. ರಾಹುಲ್ ಗಾಂಧಿ ಅವರೇ ಪ್ರಧಾನಿ ಅಭ್ಯರ್ಥಿಯಾಗಬೇಕು ಅಂತಾ ನಾನು ಬಯಸುತ್ತೇನೆ. ಮಹಾಘಟಬಂಧನ್ ಆಗಿ ಅದರಲ್ಲಿ ನಿರ್ಣಯಗಳಾದರೆ ಅದು ಚುನಾವಣೆಯ ನಂತರ ಆಗಬೇಕು, ಈಗಲ್ಲ. ಆದರೆ ಈಗಂತೂ ರಾಹುಲ್ ಗಾಂಧಿ ಅವರೇ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎನ್ನುವುದು ನಿಸ್ಸಂಶಯ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನು ಓದಿ: ಹೈ-ಕ ಹಿಂದುಳಿಯೋಕೆ ನೀವೇ ಕಾರಣ: ಅಧಿಕಾರಿಗಳ ವಿರುದ್ಧ ಗರಂ ಆದ ಖರ್ಗೆ

ಪಿ.ಚಿದಂಬರಂ ಹೇಳಿದ್ದೇನು?:
ಚೆನ್ನೈನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಸೋಮವಾರ ಮಾಜಿ ಸಚಿವ ಪಿ.ಚಿದಂಬರಂ ಮಾತನಾಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನು ಪಕ್ಷದ ಮುಖಂಡರು ನಿರ್ಣಯ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ವಿಚಾರವಿದ್ದು, ಈಗಲೇ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಜೊತೆಗೆ ಪ್ರಧಾನಿ ಸ್ಥಾನದ ಕುರಿತು ಚರ್ಚೆಯಾಗಿಲ್ಲ ಎಂದಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *