ಇಂಧನ ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ಪ್ರತಿಭಟನೆ

Rahul Gandhi

ನವದೆಹಲಿ: ಕಳೆದ 10 ದಿನಗಳಿಂದ ಪೆಟ್ರೋಲ್, ಡಿಸೇಲ್ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಇಂದಿನಿಂದ ಪ್ರತಿಭಟನೆ ಆರಂಭಿಸಿದ್ದಾರೆ.

ದೆಹಲಿಯ ವಿಜಯ್ ಚೌಕ್‍ನಲ್ಲಿ ಇಂದು ಮಾತನಾಡಿದ ರಾಹುಲ್ ಗಾಂಧಿ ಅವರು, ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಒಂಬತ್ತು ಬಾರಿ ಏರಿಕೆಯಾಗಿದೆ. ಏರುತ್ತಿರುವ ಬೆಲೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ನಾವು ಒತ್ತಾಯಿಸುತ್ತೇವೆ. ಈ ವಿಷಯವಾಗಿ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 10ನೇ ದಿನದಲ್ಲಿ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಇದೇ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಐದು ರಾಜ್ಯಗಳಲ್ಲಿ ಚುನಾವಣೆ ಮುಗಿದ ತಕ್ಷಣ ಇಂಧನ ಬೆಲೆ ಏರಿಕೆಯಾಗಲಿದೆ ಎಂದು ನಾವು ಭವಿಷ್ಯ ನುಡಿದಿದ್ದೇವು. ಅದರಂತೆ ಇದೀಗ ಇಂಧನ ಬೆಲೆ ಏರಿಕೆಯಾಗಿದೆ. ಹಾಗಾಗಿ ಇಂಧನ ಬೆಲೆ ಏರಿಕೆಯನ್ನು ಕಡಿತಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇಂಧನ ಬೆಲೆ ಏರಿಕೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಸರ್ಕಾರ ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸತತ 7ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

ಗುರುವಾರದ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‍ಗೆ ರೂ. 101.81 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.93.07 ದಾಖಲಾಗಿದೆ. ಮುಂಬೈನಲ್ಲಿ ಲೀ ಪೆಟ್ರೋಲ್‍ಗೆ 84 ಪೈಸೆ ಏರಿಕೆಯಾಗಿದ್ದು, ಈ ಮೂಲಕ ಲೀ. ಪೆಟ್ರೋಲ್ ದರ ರೂ. 116.72, ಡೀಸೆಲ್ ರೂ.100.94 ದಾಖಲಾಗಿದೆ. ಇದನ್ನೂ ಓದಿ: 8ನೇ ಬಾರಿ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

Comments

Leave a Reply

Your email address will not be published. Required fields are marked *