ರಾಹುಲ್‌ ಗಾಂಧಿ ಕೈಯಲ್ಲಿದೆ 55,000 ಕ್ಯಾಶ್‌ – ‘ಕೈ’ ಸಂಸದನ ಆಸ್ತಿ ಎಷ್ಟು ಗೊತ್ತಾ?

ತಿರುವನಂತಪುರಂ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ (Wayanad) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ 9.24 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ.

ನಾಮಿನೇಷನ್‌ಗಾಗಿ ಚುನಾವಣಾಧಿಕಾರಿಯ ಮುಂದೆ ಸಲ್ಲಿಸಿದ ಚುನಾವಣಾ ಅಫಿಡವಿಟ್‌ನಲ್ಲಿ, ರಾಹುಲ್ ಗಾಂಧಿ 2022-23 ರ ಹಣಕಾಸು ವರ್ಷದಲ್ಲಿ 1.02 ಕೋಟಿ ರೂಪಾಯಿ ಆದಾಯವನ್ನು ಘೋಷಿಸಿದ್ದಾರೆ. ಬಾಡಿಗೆ, ಸಂಸದರ ವೇತನ, ರಾಯಲ್ಟಿ ಆದಾಯ, ಬ್ಯಾಂಕ್‌ಗಳಿಂದ ಬಡ್ಡಿ, ಬಾಂಡ್‌ಗಳು, ಡಿವಿಡೆಂಡ್ ಮತ್ತು ಮ್ಯೂಚುವಲ್ ಫಂಡ್‌ಗಳು ಮತ್ತು ಷೇರುಗಳಿಂದ ಬಂಡವಾಳದ ಲಾಭವನ್ನು ಪಡೆಯುತ್ತಾರೆ ಎಂದು ಅಫಿಡವಿಟ್ ಹೇಳಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ – ವಯನಾಡ್‌ನಿಂದಲೇ ಸ್ಪರ್ಧೆ ಯಾಕೆ?

ಮಾರ್ಚ್ 15 ರ ವೇಳೆಗೆ ತಮ್ಮ ಕೈಯಲ್ಲಿ 55,000 ರೂಪಾಯಿ ನಗದು, ಉಳಿತಾಯ ಖಾತೆಯಲ್ಲಿ 26 ಲಕ್ಷ ರೂಪಾಯಿ ಇದೆ ಎಂದು ರಾಹುಲ್ ಗಾಂಧಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಸಂಸದ ಈಕ್ವಿಟಿ ಷೇರುಗಳಲ್ಲಿ 4.33 ಕೋಟಿ ರೂ. ಹೂಡಿಕೆ ಮಾಡಿದ್ದರೆ, 3.81 ಕೋಟಿ ರೂ. ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ವಾಣಿಜ್ಯ ಕಟ್ಟಡಗಳು, ಕೃಷಿಯೇತರ ಮತ್ತು ಕೃಷಿ ಭೂಮಿ ಸೇರಿದಂತೆ 11.15 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ.

ಕೇರಳದ ಎಲ್ಲಾ 20 ಸಂಸದೀಯ ಕ್ಷೇತ್ರಗಳ ಜೊತೆಗೆ ವಯನಾಡ್‌ನಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಇದಕ್ಕಾಗಿ ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಬಾಕ್ಸರ್‌ ವಿಜೇಂದರ್‌ ಸಿಂಗ್‌

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಎರಡನೇ ಬಾರಿಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಬೃಹತ್‌ ರೋಡ್‌ಶೋ ನಡೆಸಿದರು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ವಿರುದ್ಧ ವಾಗ್ದಾಳಿ ನಡೆಸಿದರು. ಭಾರತದ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಸ್ವರೂಪವನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.