ಒಳಮೀಸಲಾತಿಗೆ ಆಗ್ರಹಿಸಿ ರಾಯಚೂರು ಬಂದ್: ಬಸ್ ಸಂಚಾರ ಸಂಪೂರ್ಣ ಸ್ಥಗಿತ

ರಾಯಚೂರು: ಒಳಮೀಸಲಾತಿಗೆ ಆಗ್ರಹಿಸಿ ಇಂದು (ಅ.03) ರಾಯಚೂರು (Raichuru) ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ.

ವಿವಿಧ ಸಂಘಟನೆ ಹಾಗೂ ರಾಜಕೀಯ ಪಕ್ಷಗಳನ್ನೊಳಗೊಂಡ ಒಳಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿ ನೀಡಿರುವ ಬಂದ್ ಕರೆ ಹಿನ್ನೆಲೆ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ.ಇದನ್ನೂ ಓದಿ: ಬ್ರಾಹ್ಮಣ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು: ದಿನೇಶ್ ಗುಂಡೂರಾವ್

ನಗರದಲ್ಲಿ ಅಂಗಡಿ ಮುಗ್ಗಟ್ಟು, ತರಕಾರಿ ಮಾರುಕಟ್ಟೆ, ಹೋಟೆಲ್, ಪೆಟ್ರೋಲ್ ಬಂಕ್ ಸಂಪೂರ್ಣ ಬಂದ್ ಆಗಿವೆ. ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿ ಜಾರಿಗೆ ತರಲು ಪರಮಾಧಿಕಾರ ನೀಡಿದ್ದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ ಮೀಸಲಾತಿ ಜಾರಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕಾರಣದಿಂದಾಗಿ ಬಂದ್ ಮಾಡಲಾಗಿದೆ. ಬೆಳಿಗ್ಗೆಯಿಂದ ಜಿಲ್ಲೆ ಹಾಗೂ ಹೊರಜಿಲ್ಲೆಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಬಂದ್ ಹಿನ್ನೆಲೆ ರಾಯಚೂರು ನಗರ ಬಹುತೇಕ ಸ್ತಬ್ದವಾಗಿದೆ.

ಕಳೆದ ಕೆಲ ದಶಕಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸಿದ್ದೇವೆ. ಸುಪ್ರೀಂಕೋರ್ಟ್ (Supreme Court) ನೀಡಿರುವ ಪರಮಾಧಿಕಾರವನ್ನು ಸಿಎಂ ಸಿದ್ದರಾಮಯ್ಯ ಸದ್ಬಳಕೆ ಮಾಡಿ ಹಿಂದುಳಿದವರಿಗೆ ಅನುಕೂಲ ಮಾಡಬೇಕು. ಈ ಹಿಂದೆ ಸಿದ್ದರಾಮಯ್ಯನವರೇ ಕೊಟ್ಟ ಮಾತನ್ನು ಅವರು ಉಳಿಸಿಕೊಳ್ಳಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಕೆಂದ್ರದಿಂದ ತರೋದನ್ನು ರಾಜ್ಯಕ್ಕೆ ತನ್ನಿ, ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ – ಹೆಚ್‌ಡಿಕೆ ವಿರುದ್ಧವೇ ಜಿಟಿಡಿ ಕಿಡಿ