ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು

ರಾಯಚೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕೆ ರಾಯಚೂರಿನ (Raichuru) ಲಿಂಗಸುಗೂರು (Lingasuguru) ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನ ಅಮಾನತು ಮಾಡಲಾಗಿದೆ.

ಸಮೀಕ್ಷೆಗೆ ಸಹಕರಿಸದೇ ನಿರ್ಲಕ್ಷ್ಯ ತೋರಿದ್ದರಿಂದ ಸಮೀಕ್ಷಾ ಪ್ರಗತಿ ಕುಂಠಿತ ಹಿನ್ನೆಲೆ ಲಿಂಗಸುಗೂರು ತಹಶೀಲ್ದಾರ್ ಅವರು ವರದಿ ಸಲ್ಲಿಸಿದ್ದರು. ವರದಿ ಅನ್ವಯ ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷತನ, ಬೇಜವಾಬ್ದಾರಿತನ, ಕರ್ತವ್ಯ ಲೋಪ ಆರೋಪ ಹಿನ್ನೆಲೆ ಜಿಲ್ಲಾಧಿಕಾರಿ ನಿತೀಶ್.ಕೆ (Nitish.K) ಅವರು ರಮೇಶ್ ಜಿ.ರಾಠೋಡ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.