ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ

weather

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆ ಉಡುಪಿ, ಶಿವಮೊಗ್ಗ, ದಾವಣಗೆರೆ ಶಾಲೆಗಳಿಗೆ ಮುನ್ನೆಚರಿಕೆಯ ಕ್ರಮವಾಗಿ ರಜೆಯನ್ನು ಘೋಷಿಸಲಾಗಿದೆ.

ಮಳೆ ಅಬ್ಬರ ರಾಜ್ಯದ ಎಲ್ಲಕಡೆ ಇರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಪರಿಣಾಮ ಉಡುಪಿಯ ಶಾಲಾ-ಕಾಲೇಜ್‍ಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ, ಉಡುಪಿ, ದಾವಣಗೆರೆ, ಹಾವೇರಿಯಲ್ಲಿ ರಜೆ ಕೊಡಲಾಗಿದೆ. ಭಾರೀ ಮಳೆಯಿಂದಾಗಿ ಕೆರೆ-ಕಟ್ಟೆಗಳು ಕೋಡಿ ಬಿದ್ದು ಹರಿಯುತ್ತಿದೆ. ಮಳೆಯಿಂದಾಗಿ ಹಲವು ಅವಾಂತರಗಳಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ

rain bengaluru

ಹಾವೇರಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಎರಡು ದಿನ ರಜೆಯನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟಿಣ್ಣ ಅವರ ಘೋಷಣೆ ಮಾಡಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರಿಯುವ ಸಾಧ್ಯತೆಯ ಮುನ್ಸೂಚನೆ ನೀಡಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಿದೆ.

Comments

Leave a Reply

Your email address will not be published. Required fields are marked *