ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌

ಜೈಪುರ್: ಐದನೇ ತರಗತಿಯ ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜಸ್ಥಾನದ (Rajasthan) ಸರ್ಕಾರಿ‌ ಶಾಲೆ ಶಿಕ್ಷಕನನ್ನು (Teacher) ಟೋಂಕ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಲಾಯಿಕ್ ಅಹ್ಮದ್ ಖುರೇಷಿ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 10 ರಂದು ಖುರೇಷಿ ಬಾಲಕಿಯರಿಗೆ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಗೋಪಾಲಪುರ ಗ್ರಾಮದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ತಂದೆ, ಮೂವರು ಮಕ್ಕಳು ಸಾವು

5ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಬಾಲಕಿಯರ ಕುಟುಂಬದವರು ಖುರೇಷಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಿದ್ದರು. ಆರೋಪಿ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ತನಿಖೆ ನಿಲ್ಲಲ್ಲ, ಶಿಕ್ಷೆ ಪ್ರಮಾಣ ಕಡಿಮೆ ಆಗಬಹುದು; ಭಾವನಾತ್ಮಕ ಪತ್ರ ಕೊನೆಯ ಅಸ್ತ್ರ ಅಷ್ಟೆ – ಸ್ನೇಹಮಯಿ ಕೃಷ್ಣ