ದೇಶದ ಶಾಂತಿ ಕಾಪಾಡಲು ಎಲ್ಲಾ ಕ್ಷೇತ್ರದ ಅಭಿವೃದ್ಧಿ ಅಗತ್ಯ: ರಾಜನಾಥ್ ಸಿಂಗ್

ನವದೆಹಲಿ: ದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪ್ರತಿಯೊಂದು ಕ್ಷೇತ್ರದಲ್ಲೂ ಅಭಿವೃದ್ಧಿ ಸಾಧಿಸುವ ಅಗತ್ಯವಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವೇಗವಾಗಿ ಬದಲಾಗುತ್ತಿರುವ ವಿಶ್ವ ಕ್ರಮದಿಂದ ಉದ್ಭವಿಸಬಹುದಾದ ಸವಾಲುಗಳನ್ನು ಎದುರಿಸಲು ಎಲ್ಲಾ ಕ್ಷೇತ್ರಗಳನ್ನು ಬಲಪಡಿಸಬೇಕು. ಅದರಲ್ಲೂ ವಿಶೇಷವಾಗಿ ದೇಶದ ರಕ್ಷಣೆಯ ಉಪಕರಣವನ್ನು ನಿರಂತರವಾಗಿ ಬಲಪಡಿಸುವುದು ಅತ್ಯಗತ್ಯವಾಗಿರುತ್ತದೆ ಎಂದು ತಿಳಿಸಿದರು.

COVID-19

ದೇಶಕ್ಕೆ ಒಡ್ಡುವ ಪ್ರತಿ ಹೊಸ ಸವಾಲುಗಳು ಮೊದಲಿನಿಗಿಂತ ಹೆಚ್ಚು ಕಷ್ಟಕರವಾಗಿರುತ್ತದೆ. ಕೋವಿಡ್ ನಂತರ ಇಡೀ ಜಗತ್ತು ಉಕ್ರೇನ್‍ನ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಮತ್ತು ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಸ್ಥಿರತೆಯನ್ನು ನೋಡಿದ್ದೇವೆ. ಈ ರೀತಿಯ ಘಟನೆಗಳೆಲ್ಲವೂ ನಮ್ಮ ದೇಶದ ಮೇಲೂ ಪರಿಣಾಮ ಬೀರುತ್ತದೆ ಎಂದರು.

ಈ ಎಲ್ಲಾ ಕಾರಣದಿಂದಾಗಿ ದೇಶದಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ದೇಶದ ಪ್ರತಿಯೊಂದು ಕ್ಷೇತ್ರವನ್ನು ಸಜ್ಜುಗೊಳಿಸುವ ಅವಶ್ಯಕತೆಯಿದೆ. ಭವಿಷ್ಯದ ಹೊಸ ಬೆದರಿಕೆಗಳು ಮತ್ತು ಸವಾಲುಗಳನ್ನು ನಿಭಾಯಿಸಲು ತಂತ್ರಜ್ಞಾನದಲ್ಲಿ ಅಧಿಕ ಅಭಿವೃದ್ಧಿ ಸಾಧಿಸುವ ಅವಶ್ಯಕತೆಯಿದೆ ಎಂದು ಸಲಹೆ ನೀಡಿದರು. ಇದನ್ನೂ ಓದಿ: ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರ: ಕೇಜ್ರಿವಾಲ್

ರಕ್ಷಣಾ ತಂತ್ರಜ್ಞಾನಗಳನ್ನು ಹೆಚ್ಚು ಅಭಿವೃದ್ಧಿ ಪಡಿಸಬೇಕು. ಸರ್ಕಾರ, ಸಶಸ್ತ್ರ ಪಡೆಗಳು, ಖಾಸಗಿ ವಲಯ, ಸ್ಟಾರ್ಟ್‍ಅಪ್‍ಗಳು, ಎಂಎಸ್‍ಎಂಇಗಳು ಮತ್ತು ಅಕಾಡೆಮಿಗಳು ಒಟ್ಟಾಗಿದ್ದರೆ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಬಹುದು. ಇದರಿಂದಾಗಿ ಆತ್ಮನಿರ್ಭರ ಭಾರತದ ಗುರಿಯನ್ನು ಸಾಧಿಸಲು ಸಹಾಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಇದನ್ನೂ ಓದಿ: ಕೊಪ್ಪಳ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಯಸಿದ್ರೆ, ಆ ಕ್ಷೇತ್ರ ಬಿಟ್ಟುಕೊಡ್ತೀವಿ: ಅಮರೇಗೌಡ

Comments

Leave a Reply

Your email address will not be published. Required fields are marked *