ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್‌ – ಕಾಂಗ್ರೆಸ್‌ ಪರ ಎಸ್‌.ಟಿ.ಸೋಮಶೇಖರ್‌ ಮತ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಶಾಕ್‌ ಎದುರಾಗಿದೆ. ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ (S.T.Somashekar) ಅವರು ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದಾರೆ.

ಬಿಜೆಪಿ (BJP) ಶಾಸಕ ಸೋಮಶೇಖರ್‌ ಅಡ್ಡ ಮತದಾನ ಮಾಡಿದ್ದು, ಕಾಂಗ್ರೆಸ್‌ (Congress) ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್‌ ಪರ ಮತ ಚಲಾಯಿಸಿದ್ದಾರೆ. ಹೀಗಾಗಿ ಎಸ್‌ಟಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನವ್ರೂ ನಮಗೆ ವೋಟ್‌ ಹಾಕ್ತಾರೆ; ನಾವು ಸರ್ಜರಿ ಮಾಡ್ತೀವಿ: ಪ್ರದೀಪ್‌ ಈಶ್ವರ್‌

ಮತ ಚಲಾಯಿಸುವ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಎಸ್‌.ಟಿ.ಸೋಮಶೇಖರ್‌ ಭೇಟಿಯಾಗಿದ್ದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಯಾರನ್ನೂ ಭೇಟಿಯಾಗಿಲ್ಲ. ನನ್ನನ್ನು ಭೇಟಿ ಮಾಡಿ, ಭರವಸೆ ಕೊಟ್ಟರೆ ಅವರಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದರು.

ಎಸ್‌.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ಮನೆ ಮುತ್ತಿಗೆಗೆ ಬಿಜೆಪಿ ಯುವ ಮೋರ್ಚಾ ಮುಂದಾಗಿದೆ. ಮಧ್ಯಾಹ್ನ 12:30ಕ್ಕೆ ಪ್ರತಿಭಟನೆ ನಡೆಸಲು ಕಾರ್ಯಕರ್ತರು ಮುಂದಾಗಿದ್ದಾರೆ. ಇದನ್ನೂ ಓದಿ: ಭೇಟಿಯಾಗಿ ಭರವಸೆ ಕೊಟ್ಟವರಿಗೆ ಮತ ಹಾಕ್ತೀನಿ: ಸೋಮಶೇಖರ್