ರೈತರ ಸಮಸ್ಯೆಗೆ ಪರಿಹಾರ ಸಿಗುವವರೆಗೆ ಪತ್ರಿಭಟನೆ ಮುಂದುವರಿಯುತ್ತದೆ: ಟಿಕಾಯತ್

ಲಕ್ನೋ: ರೈತರ ಸಮಸ್ಯೆಗಳು ಚರ್ಚೆಯಾಗಬೇಕು. ಸಂಪೂರ್ಣ ಪರಿಹಾರ ಸಿಗುವವರೆಗೆ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವುದಾಗಿ ನರೇಂದ್ರ ಮೋದಿ ಘೋಷಿಸಿದ ಹಿನ್ನೆಲೆಯಲ್ಲಿ ಲಕ್ನೋದ ಇಕೋ ಗಾರ್ಡನ್‍ನಲ್ಲಿ 100ಕ್ಕೂ ಹೆಚ್ಚು ಮಂದಿ ಜಮಾಯಿಸಿ ಸಭೆ ನಡೆಸಿದರು.

ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿ ಪಡಿಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ವಜಾಗೊಳಿಸಿ, ಹಾಗೂ ಕಬ್ಬುಗಾರರಿಗೆ ಬಾಕಿ ಹಣ ಪಾವತಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಎಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ಒತ್ತಾಯಿಸಲಾಯಿತು.  ಇದನ್ನೂ ಓದಿ:  ಕೊನೆಯ ಎಸೆತದಲ್ಲಿ ಸಿಕ್ಸರ್‌, ತಮಿಳುನಾಡಿಗೆ ಟ್ರೋಫಿ – ಕರ್ನಾಟಕಕ್ಕೆ ವಿರೋಚಿತ ಸೋಲು

ನವೆಂಬರ್ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಆದರೆ ಸಂಸತ್‍ನಲ್ಲಿ ಔಪಚಾರಿಕವಾಗಿ ರದ್ದುಗೊಳಿಸುವವರೆಗೂ ಪ್ರತಿಭಟನೆಯನ್ನು ಮುಂದುವರೆಸಲಾಗುವುದು ಎಂದು ರೈತ ಮುಖಂಡ ಟಿಕಾಯತ್ ತಿಳಿಸಿದರು. ಇದನ್ನೂ ಓದಿ: RR ಫ್ರಾಂಚೈಸಿ ಜೊತೆ ಮುನಿಸಿಕೊಂಡ ಸಂಜು ಸ್ಯಾಮ್ಸನ್?

ಕೃಷಿ ಸುಧಾರಣಾ ಕಾಯ್ದೆಯ ಕುರಿತು ಸರ್ಕಾರ ಸುಳ್ಳು ಹೇಳಿಕೆಯನ್ನು ನೀಡುತ್ತಿದೆ. ಪ್ರಮುಖ ಮೂರು ಕೃಷಿ ಕಾಯ್ದೆ ರದ್ದುಗೊಳಿಸಿದರೆ ರೈತರು ತೊಂದರೆಯಿಂದ ಮುಕ್ತವಾಗುವುದಿಲ್ಲ. ಯಾವಾಗ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ರಚಿಸುತ್ತದೆಯೋ ಅಂದು ರೈತರಿಗೆ ಹಾಗೂ ಕೃಷಿ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಯಾಗುತ್ತದೆ ಎಂದು ಬಿಕೆಯು ವಕ್ತಾರ ರಾಕೇಶ್ ಟಿಕಾಯತ್ ಅಭಿಪ್ರಾಯಪಟ್ಟರು.

Comments

Leave a Reply

Your email address will not be published. Required fields are marked *