‘ಟೋಬಿ’ ಸಿನಿಮಾ ಬಗ್ಗೆ ಹಾಡಿ ಹೊಗಳಿದ ರಕ್ಷಿತ್ ಶೆಟ್ಟಿ

ರಾಜ್ ಬಿ ಶೆಟ್ಟಿ, ಚೈತ್ರಾ ಆಚಾರ್ ನಟನೆಯ ‘ಟೋಬಿ’ (Toby) ಸಿನಿಮಾ ಇಂದು (ಆಗಸ್ಟ್ 25) ರಿಲೀಸ್ ಆಗಿದೆ. ರಾಜ್ಯದೆಲ್ಲೆಡೆ ಟೋಬಿ ಸಿನಿಮಾ ನೋಡಿ ಪ್ರೇಕ್ಷಕರು ಭೇಷ್ ಎನ್ನುತ್ತಿದ್ದಾರೆ. ಇದೀಗ ರಕ್ಷಿತ್ ಶೆಟ್ಟಿ(Raskshit Shetty) ಕೂಡ ಸಿನಿಮಾ ನೋಡಿದ್ದಾರೆ. ರಾಜ್ ಬಿ ಶೆಟ್ಟಿ ನಟನೆಯ ಬಗ್ಗೆ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ:ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

‘ಟೋಬಿ’ ಸಿನಿಮಾ ನೋಡಿ ರಕ್ಷಿತ್ ಶೆಟ್ಟಿ ಮೆಚ್ಚುಗೆ ಸೂಚಿಸಿದ್ದು, ‘ಟೋಬಿ’ ಸಿನಿಮಾ ಸುಂದರವಾಗಿದೆ. ರಾಜ್ ಬಿ ಶೆಟ್ಟಿ- ನಾಯಕಿ ಚೈತ್ರಾ ಆಚಾರ್ ಅದ್ಭುತವಾಗಿ ನಟಿಸಿದ್ದಾರೆ. ಬರವಣಿಗೆ, ಸಿನಿಮಾಟೋಗ್ರಾಫಿ, ಸಂಗೀತ ಬಗ್ಗೆ ರಕ್ಷಿತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾವನ್ನ ಮಿಸ್ ಮಾಡಲೇಬೇಡಿ. ನಿಮ್ಮ ಟಿಕೆಟ್‌ನ್ನ ಬುಕ್ ಮಾಡಿ ಎಂದು ನಟ ಮನವಿ ಮಾಡಿದ್ದಾರೆ.

ಮಾರಿ ರೂಪ ತಾಳಿರೋ ರಾಜ್ ಬಿ ಶೆಟ್ಟಿ(Raj B Shetty) ಅವತಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚೈತ್ರಾ ಆಚಾರ್- ಸಂಯುಕ್ತಾ ಬೆಳವಾಡಿ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ.

ಈ ಚಿತ್ರವನ್ನು ಲೈಟರ್ ಬುದ್ಧ ಫಿಲ್ಮ್ಸ್‌ನಡಿ ನಿರ್ಮಾಣ ಮಾಡಿದ್ದರೆ, ಸಿನಿಮಾದ ಮೂಲ ಕಥೆಯನ್ನು ಟಿ.ಕೆ ದಯಾನಂದ್ ಬರೆದಿದ್ದಾರೆ. ರಾಜ್ ಬಿ ಶೆಟ್ಟಿ ನಟನೆಯ ಜೊತೆ ನಿರ್ದೇಶನ ಕೂಡ ಮಾಡಿದ್ದಾರೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]