ಲವ್ ಸ್ಟೋರಿ ಬಹಿರಂಗ ಪಡಿಸಿದ ರಕುಲ್ ಪ್ರೀತ್ ಸಿಂಗ್

ಮುಂಬೈ: ನಟಿ ರಕುಲ್ ಪ್ರೀತ್ ಸಿಂಗ್ ನಿನ್ನೆ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಲವ್ ಸ್ಟೋರಿಯನ್ನು ಬಹಿರಂಗ ಪಡಿಸಿದ್ದರು. ಈಗ ಮುಂಬೈನ ಪಾಪರಾಜಿ ಫೋಟೋಗ್ರಾಫರ್ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದ್ದಾರೆ.

ಸದ್ಯ ಬಹುಬೇಡಿಕೆಯಲ್ಲಿ ಇರುವ ನಟಿಯ ಸಾಲಿಗೆ ರಕುಲ್ ಪ್ರೀತ್ ಸಿಂಗ್ ಕೂಡಾ ಸೇರುತ್ತಾರೆ. ಇವರು ನಿನ್ನೆ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಮ್ಮ ಜನ್ಮದಿನವನ್ನು ಇಂದು ಭರ್ಜರಿಯಾಗಿ ನಟಿ ರಕುಲ್ ಪ್ರೀತ್ ಸಿಂಗ್ ಸೆಲೆಬ್ರೇಟ್ ಮಾಡಿದ್ದಾರೆ.

ಫೋಟೋಗ್ರಾಫರ್ ಮತ್ತು ಕ್ಯಾಮರಾಮ್ಯಾನ್‍ಗಳ ಜೊತೆಗೆ ಕೇಕ್ ಕತ್ತರಿಸಿ ನಟಿ ರಕುಲ್ ಪ್ರೀತ್ ಸಿಂಗ್ ಸಂಭ್ರಮಿಸಿದ್ದಾರೆ. ಸಿಂಗ್ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇಂದು ಹಸಿರು ಬಣ್ಣದ ಉಡುಪು ತೊಟ್ಟಿದ್ದ ನಟಿ ರಕುಲ್ ಪ್ರೀತ್ ಸಿಂಗ್ ಮಿರಿ ಮಿರಿ ಮಿಂಚಿದ್ದಾರೆ. ಇದನ್ನೂ ಓದಿ: ಗಾನಗಂಧರ್ವ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

ರಕುಲ್ ಪ್ರೀತಿ ಸಿಂಗ್ ಅವರ ಬಾಯ್‍ಫ್ರೆಂಡ್ ನಟ, ನಿರ್ಮಾಪಕ ಜ್ಯಾಕಿ ಭಗ್ನಾನಿ ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್‌ಡೇ ಮೈ ಲವ್ ಎಂದು ಇನ್‌ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ: ಸೊಸೆ ಕತ್ತು ಸೀಳಿದ ಮಾವ- 8ರ ಕಂದಮ್ಮ ಅನಾಥ

ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜ್ಯಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಇನ್‌ಸ್ಟಾಗ್ರಾಮ್‍ನಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್ ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಸ್ಯಾಂಡಲ್‍ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೈಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.

Comments

Leave a Reply

Your email address will not be published. Required fields are marked *