ಪರಂ ಪಿಎ ಸೂಸೈಡ್ ಪ್ರಕರಣ – ಇಂದು ರಾಮನಗರದ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ರಾಮನಗರ: ಆದಾಯ ತೆರಿಗೆ ಇಲಾಖೆ(ಐಟಿ) ದಾಳಿಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅಂತ್ಯಕ್ರಿಯೆ ಇಂದು ಬೆಳಗ್ಗೆ 11 ಗಂಟೆಗೆ ರಾಮನಗರದ ಸ್ವಗ್ರಾಮ ಮೆಳೆಹಳ್ಳಿಯಲ್ಲಿ ನಡೆಯಲಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನ ಸ್ವಗ್ರಾಮಕ್ಕೆ ರವಾನಿಸಲಾಯಿತು. ಮೃತದೇಹ ನೋಡುತ್ತಿದ್ದಂತೆಯೇ ರಮೇಶ್ ಪತ್ನಿ, ತಾಯಿ-ತಂದೆ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ರಮೇಶ್ ಮೃತದೇಹವನ್ನ ರಾತ್ರಿ ಮನೆಯ ಮುಂಭಾಗ ಅಂತಿಮ ದರ್ಶನಕ್ಕೆ ಇಡಲಾಗಿತ್ತು. 11 ಗಂಟೆಯ ನಂತರ ಸ್ವಗ್ರಾಮದಲ್ಲಿನ ರಮೇಶ್ ಜಮೀನಿನಲ್ಲಿ ಚಿತೆಯಲ್ಲಿಟ್ಟು ಅಗ್ನಿ ಸ್ಪರ್ಶಿಸುವ ಮೂಲಕ ಅಂತ್ಯಸಂಸ್ಕಾರವನ್ನು ನೆರವೇರಿಸುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಪರಮೇಶ್ವರ್ ಆಪ್ತ ರಮೇಶ್ ಐಟಿಗೆ ಬೆದರಿದ್ರಾ? ಕೊನೆ ಕ್ಷಣ ಹೇಗಿತ್ತು?

ಶನಿವಾರ ಬೆಳಗ್ಗೆ ತನ್ನಿಬ್ಬರು ಆಪ್ತರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಮೊಬೈಲ್ ಸ್ವಿಚ್ಚ್ ಆಫ್ ಆಡಿಕೊಂಡಿದ್ದರು. ಆ ನಂತರ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ರಮೇಶ್ ಶವ ಪತ್ತೆಯಾಗಿತ್ತು.

https://www.youtube.com/watch?v=unFC-S4yhps

Comments

Leave a Reply

Your email address will not be published. Required fields are marked *