5 ವರ್ಷಗಳ ಅವಧಿಯಲ್ಲಿ ರಮೇಶ್‌ ಜಾರಕಿಹೊಳಿ ಆಸ್ತಿ 72.25 ಕೋಟಿ ರೂ. ಕುಸಿತ

– ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲೆಂದು ಉಲ್ಲೇಖ

ಬೆಳಗಾವಿ: ಗೋಕಾಕ್‌ (Gokak) ಕ್ಷೇತ್ರದ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ (Ramesh Jarkiholi) ಅವರು ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದು, ಐದು ವರ್ಷಗಳ ಅವಧಿಯಲ್ಲಿ ಅವರ ಆಸ್ತಿ 72.25 ಕೋಟಿ ರೂ. ಕುಸಿದಿದೆ.

ಈ ಬಾರಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಘೋಷಿಸಿರುವ ಆಸ್ತಿ 49.25 ಕೋಟಿ ರೂ. ಇದೆ. ಗೋಕಾಕ ತಹಸೀಲ್ದಾರ್‌ ಕಚೇರಿಯಲ್ಲಿ ಗುರುವಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ ಮಾಹಿತಿ ಬಹಿರಂಗವಾಗಿದೆ. ಇದನ್ನೂ ಓದಿ: ಸಿಎಂ ನಾನೇ ಎಂಬ ಅಭಿಮಾನಿಗಳ ಮಾತು ಕೇಳಿ ಖುಷಿಯೂ ಆಗುತ್ತೆ, ನೋವು ಆಗುತ್ತೆ: ಸೋಮಣ್ಣ

2018ರ‌ ವಿಧಾನಸಭೆ ‌ಚುನಾವಣೆಯಲ್ಲಿ 122 ಕೋಟಿ ಆಸ್ತಿ ಘೋಷಿಸಿಕೊಂಡಿದ್ದರು. 2013 ರ ಚುನಾವಣೆಯಲ್ಲಿ ‌57 ಕೋಟಿ ಆಸ್ತಿ ಇರುವುದಾಗಿ ಘೋಷಿಸಿದ್ದರು. ಆದರೆ 2023ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿಯಲ್ಲಿ ಗಣನೀಯ ಕುಸಿತ ಕಂಡಿದೆ. ಪುತ್ರ ಸಂತೋಷ ‌ಜಾರಕಿಹೊಳಿ ಪ್ರತ್ಯೇಕವಾಗಿ ವಾಸಿಸುತ್ತಿರುವ ಕಾರಣಕ್ಕೆ ‌ಆಸ್ತಿ ಕುಸಿತವಾಗಿದೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಎಸ್ಐಟಿ ಕೂಡ ಬಿ ರಿಪೋರ್ಟ್‌ ಸಲ್ಲಿಸಿದೆ ಎಂದು ರಮೇಶ್‌ ಜಾರಕಿಹೊಳಿ ಉಲ್ಲೇಖಿಸಿದ್ದಾರೆ. ಎದುರಾಳಿ ತಂಡ ಎಸ್‌ಐಟಿ ಆದೇಶ ಪ್ರಶ್ನಿಸಿದೆ ಎಂದೂ ಅಫಿಡ್‌ವಿಟ್‌ನಲ್ಲಿ ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾಮಪತ್ರ ಸಲ್ಲಿಕೆ ಅವಧಿ ಅಂತ್ಯ – ಕಣದಲ್ಲಿ 4 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು