ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ, ಯತ್ನಾಳ್ ರಹಸ್ಯ ಸಮಾಲೋಚನೆ!

ವಿಜಯಪುರ: ರಾಜ್ಯದಲ್ಲಿ ಸಿಎಂ ಬದಲಾವಣೆ ಸುದ್ದಿ ಹರಡಿರುವ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಶುರುವಾಗಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರಸ್ಪರ ಗೌಪ್ಯವಾಗಿ ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ವಿಜಯಪುರ ನಗರದಲ್ಲಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತೋಟದ ಮನೆಗೆ ರಮೇಶ್ ಜಾರಕಿಹೊಳಿ ಭಾನುವಾರ ಭೇಟಿ ನೀಡಿದರು. ಇಬ್ಬರೂ ರಹಸ್ಯ ಸಭೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚಿನ ಸಮಯ ಇಬ್ಬರು ಸಮಾಲೋಚನೆ ನಡೆಸಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಬಲ ತುಂಬಲಿದ್ದಾರೆ ನಾಲ್ವರು ಕನ್ನಡಿಗರು

ಬಿಟ್ ಕಾಯಿನ್, ವಿಧಾನ ಪರಿಷತ್ ಚುನಾವಣೆ, ಸಚಿವ ಸ್ಥಾನ ಬೇಡಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದರಿಂದ ರಾಜ್ಯ ರಾಜಕೀಯದಲ್ಲಿ ಮತ್ತೇನಾದರೂ ಬದಲಾವಣೆ ಆಗಬಹುದೇ ಎಂಬ ಅನುಮಾನ ಮೂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅವ್ರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ: ಕುಟುಕಿದ ಬಿಜೆಪಿ

Comments

Leave a Reply

Your email address will not be published. Required fields are marked *