ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಶಾಸಕ ರಂಗನಾಥ್

ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬ್ಲಾಸ್ಟ್ ಕೇಂದ್ರ ಸರ್ಕಾರದ ವೈಫಲ್ಯ ಅಲ್ವಾ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ (H D Ranganath) ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬಿಜೆಪಿ ಕಚೇರಿ ಬ್ಲಾಸ್ಟ್ ಮಾಡಲು ಪ್ಲ್ಯಾನ್ ಆಗಿತ್ತು ಎಂಬ ಎನ್‌ಐಎ ಚಾರ್ಜ್ ಶೀಟ್ ವಿಚಾರ ಮತ್ತು ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಪ್ರಕರಣಗಳು ಹೆಚ್ಚು ಆಗುತ್ತಿವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎನ್‌ಐಎ ಜಾರ್ಜ್ ಶೀಟ್ ನೋಡಿದರೆ ಭಾರತ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದಾಯಿತು. ಇದು ಕೇಂದ್ರ ಸರ್ಕಾರದ ವೈಫಲ್ಯ ಆಗಿದೆ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

ಎನ್‌ಐಎ ಕೇಂದ್ರದ ಅಧೀನದಲ್ಲಿ ಬರುತ್ತೆ. ಹಾಗಾದರೆ ಅವರಿಗೆ ಜವಾಬ್ದಾರಿ ಇರಲಿಲ್ಲವಾ? ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಮುಂದೆ ಇಂತಹ ಘಟನೆ ಆಗದಂತೆ ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಆರೋಗ್ಯ ಸ್ಥಿತಿ ತೀವ್ರ ಗಂಭೀರ