ರಾಯಚೂರಿನಲ್ಲಿ ಸಾವಿರಾರು ಮುಸ್ಲಿಮರಿಂದ ಸಡಗರದ ರಂಜಾನ್ ಆಚರಣೆ

ರಾಯಚೂರು: ಜಿಲ್ಲೆಯಾದ್ಯಂತ ರಂಜಾನ್ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರದ ಈದ್ಗಾ ಮೈದಾನದಲ್ಲಿ ನೆರೆದಿದ್ದ ಸಾವಿರಾರು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ರು. ಒಬ್ಬರಿಗೊಬ್ಬರು ಪರಸ್ಪರ ಶುಭಾಶಯ ಕೋರುವುದರೊಂದಿಗೆ ರಂಜಾನ್ ಆಚರಿಸಿದ್ರು.

ಉಪವಾಸ ವ್ರತವನ್ನ ಇಂದಿಗೆ ಅಂತ್ಯಗೊಳಿಸಿದ ಮುಸ್ಲಿಮರು ಹೊಸ ಬಟ್ಟೆ ಧರಿಸಿ ಸಡಗರದಿಂದ ಹಬ್ಬದ ಮೆರವಣಿಗೆಯನ್ನ ನಡೆಸಿದ್ರು. ಹಬ್ಬದ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ನರಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಡಾ.ಶಿವರಾಜ್ ಪಾಟೀಲ್, ಸಂಸದ ಬಿ.ವಿ.ನಾಯಕ್, ಕೆಪಿಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *