ಕಾಲಿನಿಂದ ತಲೆವರೆಗೂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

ಕಲಬುರಗಿ: ಕಾಲಿನಿಂದ ತಲೆವರೆಗೂ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು.

ಸರ್ಕಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬದಲಾವಣೆ ಗಾಳಿ ಇದೆ. ಬೊಮ್ಮಾಯಿ ಅವರ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಲಿನಿಂದ ತಲೆವರೆಗೂ ಬೊಮ್ಮಾಯಿ ಅವರ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ತೈಲ ಬೆಲೆ, ಅನಿಲ ಬೆಲೆ, ಅಗತ್ಯ ವಸ್ತುಗಳ ಬೆಲೆ ನೋಡಿದ್ರೆ ಜನರನ್ನು ಸರ್ಕಾರ ಹೇಗೆ ಲೂಟಿ ಮಾಡ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದರು. ಇದನ್ನೂ ಓದಿ: ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

ಪ್ರಧಾನಿ ಮೋದಿ, ಬೊಮ್ಮಾಯಿ ಸರ್ಕಾರ ಜನರನ್ನು ಬೆಲೆ ಏರಿಕೆಯಿಂದ ಲೂಟಿ ಮಾಡ್ತಿದೆ. ವಿದೇಶದ ತೊಗರಿ ಬೇಳೆ ದೇಶಕ್ಕೆ ಬರಲಿದೆ. ನಮ್ಮ ದೇಶದ ರೈತರ ಬೇಳೆ ಮಾರಾಟವಾಗದು. ಮೋದಿ ಅವರು ಯಾವ ರಾಜ್ಯದಲ್ಲೂ ದಲಿತರನ್ನು ಸಿಎಂ ಮಾಡಿಲ್ಲ. ಆದರೆ ನಾವು ಪಂಜಾಬ್ ನಲ್ಲಿ ದಲಿತರನ್ನು ಸಿಎಂ ಮಾಡಿದ್ದೇವೆ. ದೇಶದ ಜನ ಬದಲಾವಣೆ ಬಯಸುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯ ಉಸ್ತುವಾರಿ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರಿಂದ ಸೋನಿಯಾ ಗಾಂಧಿಗೆ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಒಂದು ಕುಟುಂಬ. ಕುಟುಂಬದ ಮುಖ್ಯಸ್ಥರಿಗೆ ಪತ್ರ ಬರೆಯಲು ಮುಕ್ತ ಅವಕಾಶ ಇದೆ. ಪಕ್ಷದ ಯಾರೇ ಕಾರ್ಯಕರ್ತರು ಸೋನಿಯಾ ಗಾಂಧಿಗೆ ಪತ್ರ ಬರೆಯಬಹುದು. ತಮ್ಮ ಅಭಿಪ್ರಾಯ ಸೋನಿಯಾ ಗಾಂಧಿಗೆ ತಿಳಿಸೋದ್ರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಗ್ರಾ.ಪಂ. ನಿರ್ಲಕ್ಷ್ಯ – ಪಕ್ಕದ ಗ್ರಾಮದಿಂದ ನೀರು ತರುತ್ತಿದ್ದಾರೆ ಮಂಡ್ಯ ಗ್ರಾಮಸ್ಥರು

Comments

Leave a Reply

Your email address will not be published. Required fields are marked *