ಕಾರಿನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಿಂದ ಅತ್ಯಾಚಾರಕ್ಕೆ ಯತ್ನ !

ದಾವಣಗೆರೆ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಿಂದಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಬಿ.ರೂಪಾನಾಯ್ಕ್ ಎಂಬವರ ಮೇಲೆ ದೂರು ದಾಖಲಾಗಿದ್ದು, ರೂಪಾನಾಯ್ಕ್ ನಿರ್ದೇಶಕರಾಗಿರುವ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಮೇಲೆ ಅತ್ಯಾಚಾರ ಯತ್ನ ನಡೆದಿದ್ದು. ಅತ್ಯಾಚಾರ ಯತ್ನಕ್ಕೆ ಒಳಗಾದ ಮಹಿಳೆಯಿಂದ ದೂರು ದಾಖಲಾಗಿದೆ.

ಸರ್ಕಾರಿ ಕಾರ್ಯಕ್ರಮಕ್ಕೆಂದು ಹೊನ್ನಾಳಿಗೆ ಮಹಿಳೆಯನ್ನ ಕರೆಸಿಕೊಂಡ ರೂಪಾನಾಯ್ಕ್ ತನ್ನ ಕಾರಿನಲ್ಲಿ ಕೂರಿಸಿಕೊಂಡಿದ್ದು, ಸ್ವಲ್ಪ ಸಮಯ ಕೆಲಸದ ಬಗ್ಗೆ ಮಾತಾಡಿ ನಂತರ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಭ್ರಷ್ಟಾಚಾರ ವಿರೋಧಿ ವೇದಿಕೆ ರಾಜ್ಯಾಧ್ಯಕ್ಷ ಗುರುಪಾದಯ್ಯ ಮಠದ್ ಎಂಬವರು ಸಂತ್ರಸ್ತ ಮಹಿಳೆಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡದಂತೆ ದೇವರ ಮೇಲೆ ಆಣೆ ಮಾಡಿಸಿದ್ದು, ಬಳಿಕ ಮಹಿಳೆಗೆ ಬೆದರಿಕೆ ಹಾಕಿದ್ದಾರೆ. ಈಗ ನೊಂದ ಮಹಿಳೆಯಿಂದ ಗುರುಪಾದಯ್ಯ ಮಠದ್, ಆತನ ಪತ್ನಿ ಹಾಗೂ ಕಾರು ಚಾಲಕನ ವಿರುದ್ಧವೂ ಸಹ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *