ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆಯೇ ಚಪ್ಪಲಿ ಎಸೆದ ಅತ್ಯಾಚಾರ ಅಪರಾಧಿ!

ಗಾಂಧೀನಗರ: ಅತ್ಯಾಚಾರ ಹಾಗೂ ಕೊಲೆ ಆರೋಪ ಸಾಬೀತಾದ ಹಿನ್ನೆಲೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆಯೇ ಅಪರಾಧಿ ಚಪ್ಪಲಿ ಎಸೆದ ಘಟನೆ ಗುಜರಾತ್‌ನ ಸೂರತ್‌ ಕೋರ್ಟ್‌ನಲ್ಲಿ ನಡೆದಿದೆ.

ವಿಶೇಷ ಪೋಕ್ಸೊ ನ್ಯಾಯಾಧೀಶ ಪಿ.ಎಸ್‌.ಕಾಳ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟಿಸುತ್ತಿದ್ದರು. ಈ ವೇಳೆ ಕೋಪಗೊಂಡ ಅಪರಾಧಿ ಸುಜಿತ್‌ ಸಾಕತ್‌, ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾನೆ. ಗುರಿ ತಪ್ಪಿದ ಚಪ್ಪಲಿ ಸಾಕ್ಷಿ ಪೆಟ್ಟಿಗೆ ಬಳಿ ಬಿದ್ದಿದೆ. ಇದನ್ನೂ ಓದಿ: ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತ ಬಳಸಿ – ಸರ್ಕಾರ ಆದೇಶ

ಅಪರಾಧಿ ಮಧ್ಯಪ್ರದೇಶ ಮೂಲದವನಾಗಿದ್ದು, ಏ.30 ರಂದು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಕೊಲೆಯಾದ ಬಾಲಕಿ ವಲಸೆ ಕಾರ್ಮಿಕರ ಮಗಳಾಗಿದ್ದಳು. ಮನೆಯಲ್ಲಿ ಒಬ್ಬಳೇ ಇದ್ದಾಗ ಚಾಕೊಲೇಟ್‌ ಕೊಡಿಸುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ.

jail

ಜನನಿಬಿಡ ಪ್ರದೇಶಕ್ಕೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಾಕ್ಷಿಗಳನ್ನು ಆಧರಿಸಿ ಅಪರಾಧಿಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿ ಶುರುವಾಯ್ತಾ ಕೊರೊನಾ ಮೂರನೇ ಅಲೆ?

Comments

Leave a Reply

Your email address will not be published. Required fields are marked *