ಪ್ರಣಬ್ ಬಳಿಕ ಮೋಹನ್ ಭಾಗವತ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ರತನ್ ಟಾಟಾ!

ಮುಂಬೈ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಂತರ ದೇಶದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ರತನ್ ಟಾಟಾರವರು ಆರ್ ಎಸ್‍ಎಸ್‍ ಮುಖ್ಯಸ್ಥ ಮೋಹನ್ ಭಾಗವತ್ ಅವರ ಜತೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗಸಂಸ್ಥೆಯಾಗಿರುವ `ನಾನಾ ಪಾಲ್ಕರ್ ಸಮಿತಿ’ಯು ಮುಂದಿನ ತಿಂಗಳು ಪುಣೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ರತನ್ ಟಾಟಾ ಭಾಗವಹಿಸಲಿದ್ದಾರೆ ಎಂದು ಸಂಘದ ಮೂಲಗಳು ತಿಳಿಸಿವೆ. ಆದರೆ ಈ ಕಾರ್ಯಕ್ರಮದ ಬಗ್ಗೆ ಅಧಿಕೃತ ಘೋಷಣೆಯಾಗಬೇಕಿದ್ದು, ಆಗಸ್ಟ್ 24ರಂದು ಕಾರ್ಯಕ್ರಮ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಇದನ್ನೂ ಓದಿ: #PranabAtRSS: ರಾಷ್ಟ್ರ, ರಾಷ್ಟ್ರೀಯತೆ, ರಾಷ್ಟ್ರಭಕ್ತಿ ಬಗ್ಗೆ ಮಾತನಾಡಿದರು ಪ್ರಣಬ್ ದಾದಾ!

ಕಳೆದ ತಿಂಗಳು ನಾಗ್ಪುರದಲ್ಲಿ ನಡೆದ ಆರ್ ಎಸ್‍ಎಸ್‍ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಂಡು ದೇಶಾದ್ಯಂತ ಸಂಚಲನ ಮೂಡಿಸಿದ್ದರು. ಪ್ರಣಬ್ ಮುಖರ್ಜಿಯವರ ಭೇಟಿಯಿಂದ ಆರ್ ಎಸ್‍ಎಸ್‍ಗೆ ಸೇರ್ಪಡೆಯಾಗುವ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗಿದೆ ಸಂಘ ತಿಳಿಸಿತ್ತು.

Comments

Leave a Reply

Your email address will not be published. Required fields are marked *