ರವಿ ಡಿ.ಚನ್ನಣ್ಣನವರ್‌ ಸೇರಿ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರವಿ ಡಿ.ಚನ್ನಣ್ಣನವರ್‌ ಸೇರಿದಂತೆ 9 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿ ಎಸ್‌ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿದೆ. ಸಿಐಡಿಯಿಂದ ಭೀಮಾಶಂಕರ್ ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ, ಎಸಿಬಿಯಿಂದ ಅಬ್ದುಲ್ ಅಹದ್‌ರನ್ನು ಕೆಎಸ್‌ಆರ್‌ಟಿಸಿ ವಿಜಿಲೆನ್ಸ್‌, ಕಾರಾಗೃಹ ಇಲಾಖೆ ಎಸ್‌ಪಿ ಟಿ.ಪಿ.ಶಿವಕುಮಾರ್ರನ್ನು ಚಾಮರಾಜನಗರ ಎಸ್‌ಪಿ, ಡೆಕ್ಕ ಕಿಶೋರ್ ಬಾಬುರನ್ನು ಬೀದರ್ ಎಸ್‌ಪಿ ಹಾಗೂ ಅರುಣಂಗ್ಯು ಗಿರಿ ಅವರನ್ನು ಕೊಪ್ಪಳ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಅರುಣಾಚಲ ಪ್ರದೇಶದ ಯುವಕನನ್ನು ಬಿಡುಗಡೆ ಮಾಡಿದ ಚೀನಾ

* ಭೀಮಾಶಂಕರ ಗುಳೇದ್- ಡಿಸಿಪಿ, ಬೆಂಗಳೂರು ಪೂರ್ವ
* ಡಿ. ಕಿಶೋರ್ ಬಾಬು- ಬೀದರ್ ಪೊಲೀಸ್ ವರಿಷ್ಠಾಧಿಕಾರಿ(SP)
* ಅರುಣಾಂಗ್ಸು ಗಿರಿ- ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ
* ಡಿ.ಎಲ್.ನಾಗೇಶ್- ಸಿಐಡಿ ಎಸ್‌ಪಿ
* ಅಬ್ದುಲ್ ಅಹಾದ್- ಕೆಎಸ್‌ಆರ್‌ಟಿಸಿ ನಿರ್ದೇಶಕ
* ಟಿ.ಶ್ರೀಧರ್- ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿ
*ಟಿ.ಪಿ.ಶಿವಕುಮಾರ್- ಚಾಮರಾಜನಗರ ಎಸ್‌ಪಿ
* ದಿವ್ಯಸಾರ ಥಾಮಸ್- ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ

VIDHAN SHOUDHA

ಕೆಲ ದಿನಗಳಿಂದ ರವಿ ಡಿ.ಚನ್ನಣ್ಣನವರ್‌ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಈ ಸಂಬಂಧ ಪರ-ವಿರೋಧ ಚರ್ಚೆಗಳೂ ನಡೆಯುತ್ತಿವೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಪ್ರಸಾರವಾಗದಂತೆ ಕ್ರಮವಹಿಸಲು ಚನ್ನಣ್ಣನವರ್‌ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಇದರ ಮಧ್ಯೆಯೇ ಅವರನ್ನು ವರ್ಗಾಯಿಸಲಾಗಿದೆ. ಇದನ್ನೂ ಓದಿ: ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಆಧಾರ್ ಕಾರ್ಡ್ – ಚುನಾವಣೆ ಆಯೋಗದಿಂದ 100ಕ್ಕೂ ಹೆಚ್ಚು ಅರ್ಜಿಗಳು ವಜಾ

Comments

Leave a Reply

Your email address will not be published. Required fields are marked *