ಸಿಎಸ್‌ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ

ಬೆಂಗಳೂರು: ಪರಿಷತ್ ಸದಸ್ಯ ಎನ್ ರವಿಕುಮಾರ್ (Ravikumar) ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಜೂನ್ 30 ರಂದು ನಡೆದ ಬಿಜೆಪಿ ಪ್ರತಿಭಟನೆ ವೇಳೆ ಸಿಎಸ್ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ರವಿಕುಮಾರ್ ಅವಹೇಳನಕಾರಿಯಾಗಿ ಮಾತಾಡಿದ್ದಾರೆನ್ನಲಾದ ವಿಡಿಯೋ ವೈರಲ್ ಆಗಿದೆ. ರವಿಕುಮಾರ್ ಅವರದ್ದೆನ್ನಲಾದ ಈ ಹೇಳಿಕೆ ಬಿಜೆಪಿಗೆ ಭಾರೀ ಮುಜುಗರ ತಂದಿದೆ.

ಒಂದಲ್ಲ ಒಂದು ಹೇಳಿಕೆಯಿಂದ ವಿವಾದ ಸೃಷ್ಟಿಸುತ್ತಿರುವ ರವಿಕುಮಾರ್ ಇತ್ತೀಚೆಗಷ್ಟೇ ಕಲಬುರಗಿ (Kalaburagi) ಜಿಲ್ಲಾಧಿಕಾರಿ ವಿರುದ್ಧವೂ ವಿವಾದಾತ್ಮಕ ಹೇಳಿಕೆ ನೀಡಿ ಕೇಸ್ ಹಾಕಿಸಿಕೊಂಡಿದ್ದರು. ಇದನ್ನೂ ಓದಿ:ಕೋವಿಶೀಲ್ಡ್ಲಸಿಕೆ ಸುರಕ್ಷಿತವಾಗಿದೆ, ಹಠಾತ್‌ ಸಾವಿಗೆ ಸಂಬಂಧವಿಲ್ಲ: ಸೀರಮ್‌ ಇನ್‌ಸ್ಟಿಟ್ಯೂಟ್‌

ಈಗ ಸಿಎಸ್ ವಿರುದ್ಧ ಆಡಿದ್ದಾರೆನ್ನಲಾದ ಮಾತು ಬಿಜೆಪಿ ಹಿರಿಯರ ಅಸಮಧಾನಕ್ಕೂ ಕಾರಣವಾಗಿದೆ. ನಾಳೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿಯವರನ್ನು (Pralhad Joshi) ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿ ರವಿಕುಮಾರ್ ಸ್ಪಷ್ಟೀಕರಣ ಕೊಡಲಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ರವಿಕುಮಾರ್ ಕ್ಷಮೆ ಕೇಳಿದ್ದರೂ ಕೇಸ್ ದಾಖಲಾಗಿತ್ತು. ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ರವಿಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ. ಸಿಎಸ್ ವಿರುದ್ಧ ಆಡಿದ ಮಾತು ಬಿಜೆಪಿ ಹಿರಿಯರಿಗೆ ಅಸಮಾಧಾನ ತಂದಿದೆ.

ಪದೇ ಪದೇ ಇಂತ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ ಎಂದು ಪಕ್ಷದಲ್ಲೂ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಹೈದರಾಬಾದ್‌ನಲ್ಲಿ ಇರುವ ಪರಿಷತ್ ಸದಸ್ಯ ಎನ್ ರವಿಕುಮಾರ್ ಇಂದು ರಾತ್ರಿ ವಾಪಸ್ ಆಗಲಿದ್ದಾರೆ. ನಾಳೆ ಜೋಷಿ ಅವರನ್ನು ಭೇಟಿ ಮಾಡಲಿದ್ದಾರೆ.

ಬುಧವಾರವೇ ಈ ಸಂಬಂಧ ಯೂತ್ ಕಾಂಗ್ರೆಸ್‌ನಿಂದ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಕೊಡಲಾಗಿದೆ. ಮಹಿಳಾ ಆಯೋಗ ಹಾಗೂ ಸಭಾಪತಿ ಹೊರಟ್ಟಿಗೂ ದೂರು ಕೊಡಲಾಗಿದೆ.

ವಿಧಾನ ಪರಿಷತ್​ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಜೂನ್‌ 30 ರಂದು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್​ ಆಯುಕ್ತ (ವಿಧಾನಸೌಧ ಭದ್ರತೆ) ಎಂ ಎನ್​ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್ ಶಾಲಿನಿ ರಜನೀಶ್ ʼರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ ಸಿಎಂಗಾಗಿ ಕೆಲಸ ಮಾಡುತ್ತಾರೆʼಎಂದು ಹೇಳಿಕೆ ನೀಡಿದ್ದರು.ಈ ಹೇಳಿಕೆಯ ವಿಡಿಯೋ ಹರಿದಾಡಲು ಆರಂಭವಾಗುತ್ತಿದ್ದಂತೆ ಇದೀಗ ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.