ಕೋರ್ಟ್‍ಗೆ ಹಾಜರಾಗಿ ವಾಪಸ್ಸಾಗ್ತಿದ್ದಾಗ ರಿಯಲ್ ಎಸ್ಟೇಟ್ ಉದ್ಯಮಿಯ ಕೊಂದೇ ಬಿಟ್ರು!

ಆನೇಕಲ್: ಕೋರ್ಟ್ ಗೆ ಹಾಜರಾಗಿ ಮನೆಯತ್ತ ತೆರಳುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಬಿ.ಟಿ.ಎಂ.ನಿವಾಸಿ ರಾಜಶೇಖರ್ ರೆಡ್ಡಿ ಎಂದು ಗುರುತಿಸಲಾಗಿದೆ. ಇವರು ಜಮೀನಿನ ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ ಆನೇಕಲ್ ಕೋರ್ಟಿಗೆ ಹಾಜರಾಗಿ ನಿವಾಸದತ್ತ ತೆರಳುತ್ತಿದ್ದರು. ಈ ವೇಳೆ 3 ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.

ಆನೇಕಲ್ ಪಟ್ಟಣದಲ್ಲಿರುವ ಕೇಂದ್ರ ಸರ್ಕಾರದ ಮಂತ್ರಿ ಎ ನಾರಾಯಣಸ್ವಾಮಿ ನಿವಾಸದ ಮುಂದೆ ರಾಜಶೇಖರ್ ರೆಡ್ಡಿ ತನ್ನ ಸ್ವಿಫ್ಟ್ ಕಾರಿನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ನಂತರ ಮೊದಲಿಗೆ ಗನ್ ಮೂಲಕ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ದೂಷಕರ್ಮಿಗಳಿಗೆ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಈ ರಾಜ್ಯದ ಆಸ್ತಿ: ಕೆ.ಎಸ್‌.ಈಶ್ವರಪ್ಪ

Comments

Leave a Reply

Your email address will not be published. Required fields are marked *