ಮೃತ ವೃದ್ಧೆಯ ಹೆಬ್ಬೆಟ್ಟನ್ನು ಪೇಪರ್‌ಗೆ ಒತ್ತಿಸಿಕೊಂಡ ಪ್ರಕರಣ – ಎಫ್‍ಐಆರ್ ದಾಖಲು

ಮೈಸೂರು: ಮೃತ ವೃದ್ಧೆಯ ಹೆಬ್ಬೆಟ್ಟನ್ನು ಖಾಲಿಜಾಗಕ್ಕೆ ಒತ್ತಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಿದ್ಯಾರಣ್ಯಪುರಂ  ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಮೃತ ವೃದ್ಧೆಯ ಹೆಬ್ಬೆಟ್ಟನ್ನು ಪಡೆದ ಸುರೇಶ್ ಮೇಲೆ ಎಫ್‍ಐಆರ್ ದಾಖಲಾಗಿದೆ. ಹೆಬ್ಬೆಟ್ಟನ್ನು ಪಡೆಯುತ್ತಿರುವ ದೃಶ್ಯಗಳನ್ನು ಚಿತ್ರೀಕರಿಸಿರುವ ಕಾವ್ಯ ಪ್ರಕರಣ ದಾಖಲಿಸಿದ್ದಾರೆ.

ನಡೆದಿದ್ದೇನು?: ಶ್ರೀರಾಂಪುರ ನಿವಾಸಿ ಜಯಮ್ಮನವರು ನವೆಂಬರ್ 16 ರಂದು ವಯೋಸಹಜವಾಗಿ ಮೃತಪಟ್ಟಿದ್ದರು. ಅಂತಿಮ ದರ್ಶನ ಪಡೆಯಲು ಸಂಬಂಧಿಕರಾದ ಕಾವ್ಯ ತೆರಳಿದ್ದಾಗ ಮೃತ ಜಯಮ್ಮರವರ ಅಕ್ಕನ ಮಗ ಸುರೇಶ್ ಆಸ್ತಿಗಾಗಿ ಬಾಂಡ್ ಪೇಪರ್ ಮೇಲೆ ಮೃತ ಜಯಮ್ಮನವರ ಹೆಬ್ಬೆಟ್ಟಿನ ಗುರುತನ್ನು ಒತ್ತಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದಾಗ ನಿನಗೆ ಏಕೆ ಸುಮ್ಮನಿರು ಎಂದು ಸುರೇಶ್ ಆವಾಜ್ ಹಾಕಿ ಬಾಯಿ ಮುಚ್ಚಿಸಿದ್ದರು.

ಜಯಮ್ಮ ಅವರ ಹೆಸರಿನಲ್ಲಿ ಪಿತ್ರಾರ್ಜಿತವಾಗಿ 14 ಎಕರೆ ಆಸ್ತಿ ಇತ್ತು. ಮದುವೆಯಾದ ಬಳಿಕ ಪತಿಯಿಂದ ಜಯಮ್ಮ ದೂರವಾಗಿದ್ದರು. ಆಸ್ತಿ ಪಾಲು ಪಡೆಯಲು ಪತಿ, ಮಕ್ಕಳು ಯಾರೂ ಇರಲಿಲ್ಲ. ಹೀಗಾಗಿ ಜಯಮ್ಮ ಅವರ ಅಕ್ಕನ ಮಗ ಆಸ್ತಿಗಾಗಿ ಬಾಂಡ್ ಪೇಪರ್‌ಗೆ ಹೆಬ್ಬೆಟ್ಟು ಒತ್ತಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಾನು ಅಧಿಕಾರ ಬಯಸಿಲ್ಲ, ಜನ ಸೇವೆಯೇ ಗುರಿ: ಮೋದಿ

ಆ ವೇಳೆ ಮೃತ ವೃದ್ಧೆಯ ಹೆಬ್ಬೆಟ್ಟಿನ ಗುರುತು ಪಡೆಯುವುದನ್ನು ಕಾವ್ಯ ತಮ್ಮ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಭೇಟಿ ನೀಡಿದ ಕಾವ್ಯ, ಸುರೇಶ್ ವಿರುದ್ಧ ಠಾಣೆ ಮೊ.ಸಂ 91/2021 ಕಲಂ420, 467, 511 IPC ರೀತ್ಯಾ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Comments

Leave a Reply

Your email address will not be published. Required fields are marked *