ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಕೋವಿಡ್-19 ವೈರಾಣು ಸೋಂಕಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಗಳವಾರಸುದಾರರ ಕುಟುಂಬಗಳು ಕಾನೂನುಬದ್ಧ ಪರಿಹಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

ರಾಜ್ಯ ಸರ್ಕಾರವು ಸಂಧ್ಯಾ ಸುರಕ್ಷಾ ಯೋಜನೆಯಡಿ ಕೋವಿಡ್ ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ(ಬಿಪಿಎಲ್) ಕುಟುಂಬದ ಒಬ್ಬ ಕಾನೂನು ಬದ್ಧ ವಾರಸುದಾರರಿಗೆ ರೂ. 1.00 ಲಕ್ಷಗಳ ಪರಿಹಾರ ಹಾಗೂ ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‍ಡಿಆರ್‍ಎಫ್)ಯಡಿ ರೂ. 50,000ಗಳನ್ನು ನೇರ ನಗದು ವರ್ಗಾವಣೆ ವ್ಯವಸ್ಥೆ (ಡಿಬಿಟಿ) ಮೂಲಕ ಪಾವತಿಸಲಾಗುವುದು. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಳಿತ – ಇಂದು 214 ಕೇಸ್, 12 ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಕಾನೂನುಬದ್ಧ ವಾರಸುದಾರರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು. ಅರ್ಜಿದಾರರು ನಿಗದಿಪಡಿಸಿದ ನಮೂನೆ-1(ಫಾರಂ-1)ರಲ್ಲಿ ಮೃತ ವ್ಯಕ್ತಿ ಮತ್ತು ಅರ್ಜಿದಾರರ ವಿವರಗಳು ಹಾಗೂ ದಾಖಲೆಗಳನ್ನು ನೀಡಬೇಕು.

ದಾಖಲೆಗಳು:
– ಕೋವಿಡ್-19 ಪಾಸಿಟಿವ್ ವರದಿ ಮತ್ತು ಕೋವಿಡ್ ರೋಗಿ ಸಂಖ್ಯೆ(ಬಿ.ಯು. ಸಂಖ್ಯೆ)
– ಮರಣ ಪ್ರಮಾಣ ಪತ್ರ ಅಥವಾ ಮರಣ ಕಾರಣ ಪ್ರಮಾಣ ಪತ್ರ (ಫಾರಂ-4/4ಎ),
– ಮೃತ ವ್ಯಕ್ತಿಯ ಆಧಾರ್ ಪ್ರತಿ ಅಥವಾ ಇತರೆ ಗುರುತಿನ ಪತ್ರಗಳು,
– ಮೃತ ವ್ಯಕ್ತಿಯ ಬಿಪಿಎಲ್ ಪಡಿತರ ಚೀಟಿ(ರಾಜ್ಯ ಸರ್ಕಾರದ ಪರಿಹಾರ ಮೊತ್ತಕ್ಕಾಗಿ),
– ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಅರ್ಜಿದಾರರ ಬಿಪಿಎಲ್ ಪಡಿತರ ಚೀಟಿ(ರಾಜ್ಯ ಸರ್ಕಾರದ ಪರಿಹಾರ ಮೊತ್ತಕ್ಕಾಗಿ),
– ಬ್ಯಾಂಕ್ / ಅಂಚೆ ಖಾತೆ ಪುಸ್ತಕ ಪ್ರತಿ, ಅರ್ಜಿದಾರರ ಸ್ವಯಂ ಘೋಷಣಾ ಪತ್ರ (ಫಾರಂ-2)


– ಮೃತ ವ್ಯಕ್ತಿಯ ಪತಿ/ ಪತ್ನಿಯನ್ನು ಹೊರತುಪಡಿಸಿ, ಕುಟುಂಬದ ಇತರೆ ಸದಸ್ಯರು ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರ ಕುಟುಂಬದ ಉಳಿದ ಸದಸ್ಯರಿಂದ ನಿರಾಕ್ಷೇಪಣಾ ಪತ್ರ(ಫಾರಂ-3) ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *