`ಹೆಲ್ತ್ ಡ್ರಿಂಕ್ಸ್’ ವರ್ಗದಿಂದ ಬೋರ್ನ್‍ವಿಟಾವನ್ನು ತೆಗೆದುಹಾಕಿ: ಕೇಂದ್ರದಿಂದ ಮಹತ್ವದ ಆದೇಶ

ನವದೆಹಲಿ: ಆರೋಗ್ಯಕರ ಪಾನಿಯ (Health Drinks) ವರ್ಗದಿಂದ ಬೋರ್ನ್‍ವಿಟಾವನ್ನು (Bournvita) ತೆಗೆದು ಹಾಕುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ ಆದೇಶ ನೀಡಲಾಗಿದೆ.

ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್‌ನ (NCPCR) ತನಿಖೆಯಯಲ್ಲಿ ಬೋರ್ನ್‍ವಿಟಾ ಹೆಚ್ಚಿನ ಸಕ್ಕರೆ ಮಟ್ಟವನ್ನು ಹೊಂದಿದೆ ಎಂದು ತಿಳಿದುಬಂದಿದೆ. ಇದು ಸ್ವೀಕಾರಾರ್ಹ ಮಿತಿಗಳಿಗಿಂತ ಹೆಚ್ಚು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಂಪನಿಗಳು ಸುರಕ್ಷತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾಗಿವೆ. ಅಲ್ಲದೇ ಆರೋಗ್ಯಕರ ಪಾನೀಯಗಳು ಎಂದು ಬಿಂಬಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಎನ್‍ಸಿಪಿಸಿಆರ್, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (FSSAI) ಸೂಚಿಸಿತ್ತು. ಇದನ್ನೂ ಓದಿ: 2009, 2014, 2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? ಗೆದ್ದ ಕಲಿಗಳು ಯಾರು? – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌!

ಬೋರ್ನ್‍ವಿಟಾದ ಅನಾರೋಗ್ಯಕರ ಅಂಶಗಳ ಬಗ್ಗೆ ಮೊದಲು ಯೂಟ್ಯೂಬರ್ ಒಬ್ಬ ವಿಡಿಯೋದಲ್ಲಿ ಚರ್ಚೆ ಹುಟ್ಟುಹಾಕಿದ್ದರು. ವಿಡಿಯೊದಲ್ಲಿ ಪೌಡರ್ ಸೆಪ್ಲಿಮೆಂಟ್ ಕುರಿತು ಚರ್ಚಿಸಿದ್ದ. ಆತ ತನ್ನ ಪ್ರಯೋಗದಲ್ಲಿ ಬೋರ್ನ್‍ವಿಟಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಅಂಶ ಇದೆ ಎಂದು ಹೇಳಿದ್ದ. ಅಲ್ಲದೇ ಅದರಲ್ಲಿರುವ ಅತಿಯಾದ ಸಕ್ಕರೆ, ಕೋಕೋ ಮತ್ತು ಹಾನಿಕಾರಕ ಕೃತಕ ಬಣ್ಣಗಳು ಕ್ಯಾನ್ಸರ್ ಸೇರಿದಂತೆ ಮಕ್ಕಳಲ್ಲಿ ಗಂಭೀರವಾದ ಆರೋಗ್ಯದ ಅಪಾಯಗಳಿಗೆ ಕಾರಣವಾಗಬಹುದು ಎಂದು ಸೂಚಿಸಿದ್ದ.

ಈ ವಿಡಿಯೋ ವ್ಯಾಪಕ ವೈರಲ್ ಆಗಿ ಸಂಸ್ಥೆಯ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯ ಹೆಚ್ಚಾಗಿತ್ತು. ಇದೀಗ ಬೋರ್ನ್‍ವಿಟಾ ಪೇಯವನ್ನು `ಆರೋಗ್ಯ ಪಾನೀಯ’ ಪಟ್ಟಿಯಿಂದ ಕೈ ಬಿಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಮೋದಿ ವಿರುದ್ಧ ಮಾತನಾಡಲು ಏನಿಲ್ಲವೆಂದು ಸಂವಿಧಾನ ಬದಲಾವಣೆಯ ಭಯ ಹುಟ್ಟಿಸುತ್ತಾರೆ: ಬೊಮ್ಮಾಯಿ