ಖ್ಯಾತ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ನಿಧನ

ನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್‌ನಿಂದ ಉಂಟಾಗುವ ತೊಂದರೆಗಳಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.

72 ವಯಸ್ಸಿನ ಖ್ಯಾತ ಗಾಯಕಿಯನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅ.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಸಿನ್ಹಾ ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿತ್ತು.

ನಿಮ್ಮ ಪ್ರಾರ್ಥನೆ ಮತ್ತು ಪ್ರೀತಿ ಯಾವಾಗಲೂ ತಾಯಿಯೊಂದಿಗೆ ಇರುತ್ತದೆ. ಅವರನ್ನು ಛಾತಿ ಮೈಯಾ ತನ್ನ ಕಡೆಗೆ ಕರೆದಿದ್ದಾಳೆ ಎಂದು ಅವರ ಪುತ್ರ ಪೋಸ್ಟ್‌ನಲ್ಲಿ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ.

ಶಾರದಾ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.