ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹಿಂಗೆ ಮಾಡಿ ನನ್‌ ತಲೆಗೆ ತಂದಿದ್ದಾರೆ: ದರ್ಶನ್‌ ಅಳಲು

ಬೆಂಗಳೂರು: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್‌ (Darshan) ಅಳಲು ತೋಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renuka Swamy Murder Case) ಸಂಬಂಧಿಸಿದಂತೆ ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರಂತರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಸರ್ ನನಗೇನು ಗೊತ್ತಿಲ್ಲ ಅವನನ್ನ ಕರ್ಕೊಂಡ್ ಬಂದಿರೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ದರ್ಶನ್‌ ಹೇಳಿದ್ದು ಏನು?
ರೇಣುಕಾಸ್ವಾಮಿಯನ್ನು ಕರ್ಕೊಂಡ್ ಬಂದಿದ್ದ ದಿನ ನಾನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿದ್ದೆ. ಹುಡುಗರ ಜೊತೆ ಮದ್ಯ ಹಾಕುತ್ತಿದ್ದಾಗ ಪವನ ಅಲ್ಲಿಗೆ ಬಂದಿದ್ದ. ನನ್ನ ಕಿವಿಯಲ್ಲಿ ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದಿರುವುದಾಗಿ ಹೇಳಿದ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್‌: ಕಣ್ಣೆದುರೇ ಮಗ ಅರೆಸ್ಟ್‌ – ಮನನೊಂದ ತಂದೆ ಹೃದಯಾಘಾತದಿಂದ ಸಾವು!

ನಾನು ಸೀದಾ ಅಲ್ಲಿಂದ ಮನೆಗೆ ಹೋಗಿ ಪವಿತ್ರಾಳನ್ನು ಕರೆದುಕೊಂಡು ಶೆಡ್‌ಗೆ ಹೋದೆ. ಅವನನ್ನು ಕೊಲೆ ಮಾಡಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ.  ಅವನಿಗೆ ಹೊಡೆದು ಆತನ ಕೈಯಿಂದಲೇ ಕ್ಷಮೆ ಕೇಳಿಸಬೇಕು ಅಂತ ಇದ್ದೆ.

ನನ್ನ ಪವಿತ್ರಾಳನ್ನು ನೋಡುತ್ತಿದ್ದಂತೆ ಅವನು ತಪ್ಪಾಯ್ತು ಅಂತ ಕೇಳಿಕೊಂಡ. ಆಮೇಲೆ ನಾನು ಅವನಿಗೆ ಅವನಿಗೆ ಊಟಕ್ಕೆ ದುಡ್ಡು ಕೊಟ್ಟು ಊಟ ಮಾಡಿಕೊಂಡು ಊರಿಗೆ ಹೋಗು ಅಂತ ಹೇಳಿ ಬಂದೆ. ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ. ಅಷ್ಟೇ ಸರ್‌ ವಿಷಯ. ನನಗೆ ಬೇರೆ ಏನು ಗೊತ್ತಿಲ್ಲ.