ಮೀಸಲಾತಿ ಅಭ್ಯರ್ಥಿಗಳು ಅಧಿಕ ಅಂಕ ಗಳಿಸಿದ್ರೆ ಸಾಮಾನ್ಯ ವರ್ಗದಡಿ ಪರಿಗಣನೆ: ಸುಪ್ರೀಂ

SUPREME COURT

ನವದೆಹಲಿ: ಅಧಿಕ ಅಂಕ ಗಳಿಸಿದ ಮೀಸಲಾತಿ ಅಭ್ಯರ್ಥಿಗಳನ್ನು ಸಾಮಾನ್ಯ ವರ್ಗದಡಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ಗುರುವಾರ ತಿಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠವು, ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಕೊನೆಯ ಅಭ್ಯರ್ಥಿ ಪಡೆದದ್ದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಮೀಸಲಾತಿ ಇರುವ ಅಭ್ಯರ್ಥಿಯನ್ನು ಸಾಮಾನ್ಯ ವರ್ಗದಡಿ ಪರಿಗಣಿಸಬೇಕು ಎಂದು ಹೇಳಿದೆ. ಇದನ್ನೂ ಓದಿ: ಧ್ವನಿವರ್ಧಕಗಳ ವಿಚಾರವಾಗಿ ಬಿಜೆಪಿ ರಾಜಕೀಯ ಮಾಡ್ತಿದೆ: ಸಂಜಯ್ ರಾವತ್

ಮೀಸಲಾತಿ ವರ್ಗಗಳ ಅಭ್ಯರ್ಥಿಗಳು ಅರ್ಹತೆ ಹಾಗೂ ತಾವು ಪಡೆದ ಸ್ಥಾನದ ಕಾರಣಗಳಿಂದಾಗಿ ಮೀಸಲಾತಿ ಇಲ್ಲದ ಹುದ್ದೆಗಳಿಗೆ ಆಯ್ಕೆಯಾಗುವಂತಿದ್ದರೆ, ಆ ಅಭ್ಯರ್ಥಿಗಳು ಸಾಮಾನ್ಯ ವರ್ಗದಲ್ಲಿನ ಹುದ್ದೆಗಳನ್ನೇ ಆಯ್ಕೆ ಮಾಡಬಹುದು ಎಂದು ಪೀಠ ತಿಳಿಸಿದೆ.

ಇಂದಿರಾ ಸ್ನೇಹಿ ಪ್ರಕರಣ (1992), ಸೌರವ್‌ ಯಾದವ್‌ (2021), ಸಾಧನಾಸಿಂಗ್‌ ಡಾಂಗಿ (2022) ಪ್ರಕರಣಗಳಲ್ಲಿ ಪಾಲಿಸಲಾದ ನಿಯಮಗಳನ್ನೇ ಈ ಪ್ರಕರಣಕ್ಕೂ ನ್ಯಾಯಪೀಠ ಅನ್ವಯಿಸಿದೆ. ಇದನ್ನೂ ಓದಿ: ಮೇ 13ರಿಂದ ಕನ್ನಡದಲ್ಲೂ ನೋಡಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ

ರಾಜಸ್ಥಾನದ ಬಿಎಸ್‌ಎನ್‌ಎಲ್‌ನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ನಡೆದ ನೇಮಕಾತಿಯಲ್ಲಿ ಮೀಸಲಾತಿ ವರ್ಗದ ಇಬ್ಬರು ಅಭ್ಯರ್ಥಿಗಳು ಸಾಮಾನ್ಯ ವರ್ಗದವರ ಪೈಕಿ ಕೊನೆಯ ಅಭ್ಯರ್ಥಿಗಿಂತ ಹೆಚ್ಚು ಅಂಕ ಗಳಿಸಿದ್ದರೂ ಅವರನ್ನು ಒಬಿಸಿ ವರ್ಗದಡಿ ಪರಿಗಣಿಸಲಾಗಿತ್ತು. ಈ ವಿಷಯ ಕೋರ್ಟ್‌ ಮೆಟ್ಟಿಲೇರಿತ್ತು.

ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಒಬಿಸಿ ಅಭ್ಯರ್ಥಿಯನ್ನು ತಾಂತ್ರಿಕ ಸಹಾಯಕ ಹುದ್ದೆಗೆ ಪರಿಗಣಿಸುವಂತೆ ನಿರ್ದೇಶನ ನೀಡಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಬಿಎಸ್‌ಎನ್‌ಎಲ್‌ ಅರ್ಜಿ ಸಲ್ಲಿಸಿತ್ತು. ನ್ಯಾಯಪೀಠವು ಬಿಎಸ್‌ಎನ್‌ಎಲ್‌ನ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

Comments

Leave a Reply

Your email address will not be published. Required fields are marked *