ಎಚ್‍ಡಿಕೆ ಸಿಎಂ, ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು: ಮಮತಾ, ಚಂದ್ರಬಾಬು ನಾಯ್ಡು ಬಣ್ಣನೆ

ಬೆಂಗಳೂರು: ಕರ್ನಾಟಕದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್‍ಡಿ ಕುಮಾರಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಈಗಷ್ಟೇ ಕರೆ ಮಾಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ತಿಳಿಸಿದೆ. ಈ ವೇಳೆ ಅವರು ಸೋಮವಾರದ ಪ್ರಮಾಣವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಪ್ರಜಾಪ್ರಭುತ್ವಕ್ಕೆ ಜಯವಾಗಿದೆ. ಅಭಿನಂದನೆಗಳು ಕರ್ನಾಟಕ. ದೇವೇಗೌಡ, ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಇತರರಿಗೆ ಅಭಿನಂದನೆಗಳು. ಇದು ಪ್ರಾದೇಶಿಕ ಪಕ್ಷಕ್ಕೆ ದೊರೆತ ಜಯ ಎಂದು ಬಣ್ಣಿಸಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವಕ್ಕೆ ಸಿಕ್ಕ ನಿಜವಾದ ಗೆಲುವು. ಮುಖ್ಯಮಂತ್ರಿಯಾಗಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟ ನನಗೆ ಬಹಳ ಸಂತಸ ನೀಡಿದೆ. ನನ್ನ ಸಂತೋಷವನ್ನು ಈ ಮೂಲಕ ವ್ಯಕ್ತಪಡಿಸುತ್ತೇನೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಟ್ವೀಟ್ ಮಾಡಿ ತಿಳಿಸಿದ್ದಾರೆ.

 

Comments

Leave a Reply

Your email address will not be published. Required fields are marked *