ಸಚಿವರಾಗ್ತಾರಾ ಎಚ್. ವಿಶ್ವನಾಥ್? ಎಚ್.ಡಿ.ರೇವಣ್ಣ ಹೇಳಿದ್ದು ಹೀಗೆ

ಮಡಿಕೇರಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ವಿಶ್ವನಾಥ್ ಮುಂದುವರೆಯುತ್ತಾರೆ. ಯಾವುದೇ ಗೊಂದಲ ಬೇಡ. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿ, ಎಚ್‍ಡಿಡಿಗೆ ಬಿಟ್ಟ ವಿಚಾರ ಅದರ ಬಗ್ಗೆ ನಾನು ಮಾತಾನಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಬೇರೆ ಇಲಾಖೆಯ ಅಧಿಕಾರಿಗಳನ್ನು ನಾನು ವರ್ಗಾವಣೆ ಮಾಡುವ ಕೆಲಸಕ್ಕೆ ಕೈ ಹಾಕಿಲ್ಲ. ಬೇರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ. ರಾಜ್ಯ ಸರ್ಕಾರ ಸುಭದ್ರವಾಗಿದೆ, ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೊಡಗು, ಹಾಸನ, ಚಿಕ್ಕಮಗಳೂರು ಕಾಫಿ ಬೆಳೆಗಾರರಿಗೆ ಆದ ನಷ್ಟದ ಶೇ. 50ರಷ್ಟು ಪರಿಹಾರವನ್ನು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸ್ಪಂದಿಸುವ ಭರವಸೆ ಇದೆ. ಕೊಡಗಿನ ರಸ್ತೆಗೆ 44 ಕೋಟಿ ಹಣ ಬಿಡುಗಡೆಯಾಗಿದೆ. ಅಧಿಕಾರಿಗಳು ಕಾನೂನು ಬಿಟ್ಟು ಕೆಲಸ ಮಾಡಬಾರದು. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ರು.

ರೈತರ ಸಾಲಮನ್ನಾ ಮಾಡುವ ಬಗ್ಗೆ ಮಾತಾನಾಡಿ ರೇವಣ್ಣ, ಬಿಜೆಪಿಯವರಿಗೆ ಮಾನಮರ್ಯಾದೆ ಇದ್ದರೆ ಸಾಲಮನ್ನಾದ ಬಗ್ಗೆ ಮಾತನಾಡಬಾರದು. ರೈತರು ಸಾಲದ ಬಗ್ಗೆ ಚಿಂತೆ ಮಾಡುವ ಅಗತ್ಯ ಇಲ್ಲ. ನಮ್ಮ ಸರ್ಕಾರದಲ್ಲಿಯೇ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *