ಬಡವರು ಬಡವರಾಗ್ತಿದ್ದಾರೆ, ಶ್ರೀಮಂತರು ಶ್ರೀಮಂತರಾಗ್ತಿದ್ದಾರೆ: ಮೋದಿ ಸರ್ಕಾರದ ವಿರುದ್ಧ ಸಿಂಗ್‌ ವಾಗ್ದಾಳಿ

ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ಪ್ರಚಾರದ ಕಾವು ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಪಂಜಾಬ್‍ನಲ್ಲಿ ರ‍್ಯಾಲಿ ನಡೆಸುತ್ತಿದ್ದರೆ, ಇತ್ತ ದೆಹಲಿಯಿಂದಲೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಹಿನ್ನೆಲೆ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಆಡಳಿತ ವೈಫಲ್ಯ ಕಂಡಿದೆ. ಈ ಸರ್ಕಾರದಲ್ಲಿ ಬಡವರು ಬಡವರಾಗಿ, ಶ್ರೀಮಂತರು ಶ್ರೀಮಂತರಾಗುತ್ತಿದ್ದು, ಈ ಸರ್ಕಾರಕ್ಕೆ ಆರ್ಥಿಕ ನೀತಿಯ ಬಗ್ಗೆ ತಿಳುವಳಿಕೆಯೇ ಇಲ್ಲ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಇಸ್ಲಾಮಿಕ್ ಸಮವಸ್ತ್ರ ಪದ್ಧತಿಯನ್ನು ಶಾಲೆಯಲ್ಲಿ ತರಲು ಪ್ರಯತ್ನ: ಹಿಂದೂ ಮಹಾಸಭಾ ಕಿಡಿ

ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ. ಚೀನಾ ನಮ್ಮ ಗಡಿಯಲ್ಲಿ ಕುಳಿತಿದೆ. ಇದನ್ನು ಮರೆಮಾಚುವ ಪ್ರಯತ್ನ ನಡೆಯುತ್ತಿದೆ. ರಾಜಕಾರಣಿಗಳಿಗೆ ಅಪ್ಪುಗೆ ನೀಡುವುದರಿಂದ ಅಥವಾ ಆಹ್ವಾನವಿಲ್ಲದೆ ಬಿರಿಯಾನಿ ತಿನ್ನಲು ಹೋಗುವುದರಿಂದ ಸಂಬಂಧಗಳು ಸುಧಾರಿಸುವುದಿಲ್ಲ ಎಂದು ನರೇಂದ್ರ ಮೋದಿ ಅವರನ್ನು ಕುಟುಕಿದ್ದಾರೆ.

ಬಿಜೆಪಿ ಸರ್ಕಾರದ ರಾಷ್ಟ್ರೀಯತೆಯು ಬ್ರಿಟಿಷರ ಡಿವೈಡ್ ಆ್ಯಂಡ್ ರೂಲ್ ನೀತಿಯನ್ನು ಆಧರಿಸಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಭದ್ರತೆ ವಿಚಾರದಲ್ಲಿ ಪಂಜಾಬ್ ಸರ್ಕಾರವನ್ನು ಟಾರ್ಗೆಟ್ ಮಾಡುವ ಮೂಲಕ ಪಂಜಾಬ್ ಜನರನ್ನು ಅವಮಾನಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

Comments

Leave a Reply

Your email address will not be published. Required fields are marked *