ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಇಂದು 33 ವಸಂತಕ್ಕೆ ಕಾಲಿಟ್ಟಿದ್ದಾರೆ.
ಯಶ್ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ತಮ್ಮ ಅಭಿಮಾನಿಗಳಿಗೆ ಯಶ್ ತಿಳಿಸಿದ್ದಾರೆ. ಹಾಗಾಗಿ ಅಭಿಮಾನಿಗಳು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಫೋಟೋ ಹಾಕುವುದರ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರುತ್ತಿದ್ದಾರೆ.

ಯಶ್ ಅವರು ತಂದೆಯಾದ ಬಳಿಕ ಇದು ಅವರ ಮೊದಲನೇ ಹುಟ್ಟುಹಬ್ಬವಾಗಿದ್ದು, ಭಾನುವಾರ ಯಶ್ ಟ್ವಿಟ್ಟರಿನಲ್ಲಿ ಲೈವ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ, ಈ ವರ್ಷ ಜನ್ಮದಿನ ಆಚರಿಸುತ್ತಿಲ್ಲ. ಅಭಿಮಾನಿಗಳು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು.

ನಮ್ಮ ಕುಟುಂಬದ ಹಿರಿಯರಾದ ರೆಬಲ್ ಸ್ಟಾರ್ ಅಂಬರೀಷ್ ಅವರು ಕೆಲ ದಿನಗಳ ಹಿಂದಷ್ಟೇ ನಮ್ಮನ್ನ ಅಗಲಿದ್ದಾರೆ. ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರು ಅನ್ಯತಾ ಭಾವಿಸಬೇಡಿ. ಅಲ್ಲದೇ ಯಶೋ ಯಾತ್ರೆ ಮೂಲಕ ನಿಮ್ಮ ಗ್ರಾಮಗಳಿಗೆ, ನಗರಗಳಿಗೆ ಭೇಟಿ ನೀಡುತ್ತೇವೆ. ಅಲ್ಲಿಯವರೆಗೂ ಸಹಕಾರ ನೀಡಿ ಎಂದ ಅವರು, ನನ್ನ ಅಭಿಪ್ರಾಯ ಹಾಗೂ ಭಾವನೆಯನ್ನು ಗೌರವಿಸುತ್ತೀರಾ ಎಂದು ನಂಬಿರುವೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷದಲ್ಲಿ ಸಾಧನೆಗಳು ನಿಮ್ಮದಾಗಲಿ ಎಂದು ಹಾರೈಸಿದರು.
ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ಸಿನಿಮಾರಂಗದಲ್ಲಿ ಅನೇಕ ದಾಖಲೆಗಳನ್ನು ಮುರಿದು, ದೇಶ ಹಾಗೂ ಹೊರದೇಶದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply