ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌ – ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜಗದೀಶ್‌ನನ್ನು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ವಹಿಸಿ 1ನೇ ಎಸಿಜೆಎಂ ಕೋರ್ಟ್‌ ಆದೇಶಿಸಿದೆ.

ಜಗದೀಶ್‌ನನ್ನು (Jagga) ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಡಿ ವಶಕ್ಕೆ ಪಡೆಯಿತು. 1 ನೇ ಎಸಿಜೆಎಂ ಕೋರ್ಟ್‌ಗೆ ಆರೋಪಿಯನ್ನು ಹಾಜರುಪಡಿಸಲಾಗಿತ್ತು. 10 ದಿನ ಸಿಐಡಿ ಕಸ್ಟಡಿಗೆ ಪಡೆದಿದೆ. ಕೊಲೆ ಕೇಸ್ ಹಾಗೂ ಕೋಕಾ ಕಾಯ್ದೆಯಡಿ ಜಗ್ಗನನ್ನ ಸಿಐಡಿ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

ಜು.15 ರಂದು ಭಾರತಿನಗರದಲ್ಲಿ ಬಿಕ್ಲು ಶಿವನ ಕೊಲೆಯಾಗಿತ್ತು. ರೌಡಿಶೀಟರ್ ಕೊಲೆ ಕೇಸ್‌ನಲ್ಲಿ ಜಗದೀಶ್‌ ಎ1 ಆರೋಪಿಯಾಗಿದ್ದ. ಕೊಲೆಯ ನಂತರ ಚೆನ್ನೈ ಏರ್‌ಪೋರ್ಟ್‌ನಿಂದ ದುಬೈಗೆ ಎಸ್ಕೇಪ್ ಆಗಿದ್ದ.

ಭಾರತಿನಗರ ಪೊಲೀಸ್‌ ಠಾಣೆಯಲ್ಲಿ ಬಿಕ್ಲು ಶಿವನ ಕೊಲೆ ಕೇಸ್ ದಾಖಲಾಗಿತ್ತು. ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌