ಮಿಸ್ಡ್‌ಕಾಲ್ ಕೊಟ್ಟು ಬಿಜೆಪಿ ಸದಸ್ಯತ್ವ ಪಡೆದಿದ್ದ ಸೈಲೆಂಟ್ ಸುನಿ – ಸದಸ್ಯತ್ವ ರದ್ದುಗೊಳಿಸಿದ ಪಕ್ಷ

ಬೆಂಗಳೂರು: ಮಿಸ್ಡ್‌ಕಾಲ್ ಕೊಟ್ಟು ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದ ರೌಡಿಶೀಟರ್ ಸೈಲೆಂಟ್ ಸುನೀಲನ (Silent Sunila) ಸದಸ್ಯತ್ವವನ್ನು ಕೆಲವೇ ಗಂಟೆಗಳಲ್ಲಿ ರದ್ದುಮಾಡಲಾಗಿದೆ.

ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ಸದಸ್ಯತ್ವ (BJP MemberShip) ಪಡೆದು ಸಂಭ್ರಮಿಸುತ್ತಿದ್ದ ವಿಚಾರದ ಬೆಳಕಿಗೆ ಬರುತ್ತಿದ್ದಂತೆ, ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾಗಿದ್ದು, ಕೆಲವೇ ಗಂಟೆಗಳಲ್ಲಿ ಸದಸ್ಯತ್ವ ರದ್ದುಪಡಿಸಿದೆ. ಇದನ್ನೂ ಓದಿ: ಅಂಧ ಜೋಡಿಗೆ ಬೆಳಕಾದ 400 ಆಟೋ ಚಾಲಕರು

ಈ ಬಗ್ಗೆ ಬೆಂಗಳೂರು (Bengaluru) ಕೇಂದ್ರದ ಅಧ್ಯಕ್ಷ ಮಂಜುನಾಥ್ `ಪಬ್ಲಿಕ್ ಟಿವಿ’ಗೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಜನರನ್ನು ಸೇರಿಸಿಕೊಳ್ಳಲು ಮಿಸ್ಡ್ಕಾಲ್ ಅಭಿಯಾನ ಶುರು ಮಾಡಿದೆ. ಈ ಸಂಖ್ಯೆಗೆ ಮಿಸ್ಡ್ಕಾಲ್ ಕೊಟ್ಟು ಸೈಲೆಂಟ್ ಸುನೀಲ ಬಿಜೆಪಿ ಸದಸ್ಯತ್ವ ಪಡೆದಿದ್ದಾನೆ. ಈ ವಿಷಯ ತಿಳಿದ ಕೂಡಲೇ ಬೆಂಗಳೂರು ಕೇಂದ್ರ ಜಿಲ್ಲಾ ಘಟಕದಿಂದ ಸೈಲೆಂಟ್ ಸುನೀಲನ ಬಿಜೆಪಿ ಸದಸ್ಯತ್ವ ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಇತಿಹಾಸದಲ್ಲಿ ಬಂದು ಹೋದವ್ರು 25 ಸಿಎಂ; ಪೂರ್ಣಾವಧಿ ಆಡಳಿತ ಮಾಡಿದವ್ರು ಮೂರೇ ಮಂದಿ

ಕೆಲ ದಿನಗಳ ಹಿಂದೆಯಷ್ಟೇ ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಬಗ್ಗೆ ವಿವಾದ ಎದ್ದಿತ್ತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (NalinKumar Kateel), ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಹೇಳಿದ್ದರು. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನ ಪಕ್ಷಕ್ಕೆ ಯಾವುದೇ ಕಾರಣಕ್ಕೂ ಸೇರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಶನಿವಾರ ಸುನೀಲ ಪಕ್ಷ ಸೇರ್ಪಡೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಆತನ ಸದಸ್ಯತ್ವವನ್ನು ರದ್ದುಮಾಡಿದೆ.

Comments

Leave a Reply

Your email address will not be published. Required fields are marked *