ಗ್ಯಾಂಗ್ ಕಟ್ಟಿಕೊಂಡು ಓಡಾಡಿದ್ರೆ ಯಾವುದೇ ಕಾರಣಕ್ಕೂ ಬಿಡಲ್ಲ: ಎಸ್‍ಪಿ ರಿಷ್ಯಂತ್ ಎಚ್ಚರಿಕೆ

ದಾವಣಗೆರೆ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಎಸ್‍ಪಿ ರಿಷ್ಯಂತ್ ರೌಡಿ ಪರೇಡ್ ನಡೆಸಿದರು. ನಗರದ ಹೈಸ್ಕೂಲ್ ಮೈದಾನದಲ್ಲಿ ರೌಡಿಪರೇಡ್ ನಡೆಸಿದ್ದು, ಹಾಲಿ ಕಾಂಗ್ರೆಸ್ ಕಾರ್ಪೋರೇಟರ್ ಶ್ರೀನಿವಾಸ್ ಅಲಿಯಾಸ್ ಮೋಟ್ ಬಳ್ ಸೀನಪ್ಪ, ಸಂತೋಷ್ ಅಲಿಯಾಸ್ ಕಣ್ಮ ಸೇರಿದಂತೆ ನೂರಕ್ಕೂ ಹೆಚ್ಚು ರೌಡಿ ಶೀಟರ್ ಗಳು ಪರೇಡ್ ನಲ್ಲಿ ಹಾಜರಾಗಿದ್ದರು.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು ಪರೇಡ್ ನಲ್ಲಿ ಪಾಲ್ಗೊಂಡಿದ್ದು, ಕೆಲವರಿಗೆ ವಯಸ್ಸಾಗಿರುವ ವಿಚಾರವೂ ಗಮನಕ್ಕೆ ಬಂದಿದೆ. ಅವರ ಸನ್ನಡತೆ ಆಧಾರವಾಗಿಟ್ಟುಕೊಂಡು ಅವರನ್ನು ರೌಡಿಶೀಟರ್ ಪಟ್ಟಿಯಿಂದ ತೆಗೆಯುವ ಕುರಿತಂತೆ ಪರಾಮರ್ಶೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಲ್ಲದೆ ಪಂಚಾಯ್ತಿ ಮಾಡೋದು, ಜನರಿಗೆ ಹೆದರಿಸೋದು, ಹಫ್ತಾ ವಸೂಲಿ ಮಾಡಲು ಮುಂದಾದರೆ ಮತ್ತ ಗ್ಯಾಂಗ್ ಕಟ್ಟಿಕೊಂಡು ಓಡಾಡುವುದನ್ನು ಮಾಡಿದೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

ಜನರಿಗೆ ತೊಂದರೆ ಕೊಟ್ಟರೆ ಅದರ ಬಗ್ಗೆ ದೂರು ಬಂದರೆ ಸುಮ್ಮನಿರಲ್ಲ, ಕಾನೂನು ಕ್ರಮ ಕೈಗೊಳ್ಳುತ್ತೇನೆ. ಈಗಾಗಲೇ ಕೆಲವರು ರೌಡಿಶೀಟರ್ ಗಳು ಜನರನ್ನು ಹೆದರಿಸಿ ಕೆಲವರು ಪುಂಡಾಟಿಕೆ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ರೌಡಿಶೀಟರ್ ಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದು ಕಂಡು ಬಂದರೆ ಅವರಿಗೆ ಇದೇ ಕಡೆ ವಾರ್ನಿಂಗ್ ಇಲ್ಲ ಅಂದ್ರೆ ಏನ್ ಮಾಡಬೇಕೋ ಅದು ನಾವು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಸಲ್ಮಾನ್ ಖಾನ್ ತಡೆದ ಅಧಿಕಾರಿಗೆ ಇನಾಮು

ಇನ್ನು ಕೆಲವರು ಕೆಲವೊಂದು ಕಾರಣಗಳಿಂದ ರೌಡಿಶೀಟರ್ ಓಪನ್ ಆಗಿರುತ್ತದೆ, ಅದನ್ನು ಪರಿಶೀಲನೆ ಮಾಡಿ ಸನ್ನಡತೆಯಿಂದ ಅವರನ್ನು ರೌಡಿ ಶೀಟರ್ ನಿಂದ ಕೈಬಿಡಲಾಗುವುದು. ಎಲ್ಲರೂ ಕೂಡ ಬದಲಾಗಿ, ಏನಾದ್ರು ಇದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಪತ್ರವನ್ನು ನೀಡಿ ಎಂದು ತಿಳಿಸಿದರು. ಇದನ್ನೂ ಓದಿ: ನಂದಿಬೆಟ್ಟದ ಬಳಿ ಭೂಕುಸಿತ – ಕಲ್ಲು ಗಣಿಗಾರಿಕೆಯ ಬ್ಲಾಸ್ಟಿಂಗ್‍ಗೆ ಬೆದರಿದ್ವಾ ಪಂಚಗಿರಿಗಳು?

Comments

Leave a Reply

Your email address will not be published. Required fields are marked *