ನಾಯಿಯ ಮೇಲೆ ಅತ್ಯಾಚಾರ-ಆರೋಪಿಯನ್ನು ಪತ್ತೆ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

ಹೈದರಾಬಾದ್: ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ನಡೆಸಿರುವ ವೀಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಅಂತರಾಷ್ಟ್ರೀಯ ಎನ್‍ಜಿಒ ಈ ಅಮಾನನವೀಯ ಕೃತ್ಯ ಎಸಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಘೋಷಿಸಿದೆ.

ಹ್ಯೂಮನ್ ಸೊಸೈಟಿ ಇಂಟರ್ನ್ಯಾಷನಲ್/ಇಂಡಿಯಾ (ಎಚ್‍ಎಸ್‍ಐ) ಹೆಸರಿನ ಸಂಸ್ಥೆ ಈ ದಿಟ್ಟ ನಿರ್ಧಾರವನ್ನು ಮಾಡಿದೆ. ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದರೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ.

ಹೈದರಾಬಾದ್‍ನಲ್ಲಿ ನಾಯಿಯೊಂದರ ಮೇಲೆ ನಿರ್ಜನ ಕಟ್ಟಡವೊಂದರಲ್ಲಿ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ವಿಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ವಿಡಿಯೋದಲ್ಲಿ ಅಪರಿಚಿತ ಶಿಥಿಲ ಕಟ್ಟಡದಲ್ಲಿ ನಾಯಿಯೊಂದನ್ನು ವ್ಯಕ್ತಿ ಬಲವಂತವಾಗಿ ಹಿಡಿದಿಟ್ಟುಕೊಂಡು ಆ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ನಡೆಸಿರುವ ದೃಶ್ಯಗಳು ಸೆರೆಯಾಗಿದೆ. ಅಲ್ಲದೆ ನಾಯಿ ಆತನಿಂದ ತಪ್ಪಿಸಿಕೊಂಡು ಪಾರಾಗಲು ಯತ್ನಿಸಿದರು ಸಾಧ್ಯವಾಗದೇ ನರಳುತ್ತಿರುವ ದೃಶ್ಯ ನೋಡುಗರ ಮನಕಲಕುತ್ತದೆ.

ಹಿಂಸಾತ್ಮಕ ಮನಸ್ಥಿತಿ ಇರುವ ಜನರು ಪ್ರಾಣಿಗಳಿಗೆ ಹಿಂಸೆ ನೀಡುತ್ತಾ ಮನುಷ್ಯತ್ವ ಮರೆತು ಕ್ರೌರ್ಯ ಮೆರೆಯುತ್ತಿದ್ದಾರೆ. ದಿನೇ ದಿನೇ ಕಾಮುಕರ ಹಾವಳಿ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಎಚ್‍ಎಸ್‍ಐ/ಭಾರತದ ವ್ಯವಸ್ಥಾಪಕ ನಿರ್ದೇಶಕ ಎನ್. ಜಿ. ಜಯಸಿಂಹ ಹೇಳಿದ್ದಾರೆ.

ಈಗಾಗಲೇ ಈ ಸಂಬಂಧ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಪತ್ತೆಮಾಡಲು ತನಿಖೆ ಆರಂಭಿಸಿದ್ದಾರೆ.

Comments

Leave a Reply

Your email address will not be published. Required fields are marked *