ಹಾಸನ: ಹಾಲಿ ಸಚಿವ ರೇವಣ್ಣ ಅಧಿಕಾರದಲ್ಲಿ ಇದ್ದಾಗ ಒಂದು ರೀತಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಎಂದು ರೀತಿ ಎಂಬಂತೆ ವರ್ತಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಹಾಸನಾಂಬ ದೇವಿ ದರ್ಶನ ಪಡೆಯುವ ಟಿಕೆಟ್ ದರದ ವಿಚಾರದಲ್ಲಿ ಎ.ಮಂಜು ಸಚಿವರಾಗಿದ್ದಾಗ ವಿರೋಧಿಸಿದ್ದ ರೇವಣ್ಣ, ಈಗ ಯಾವುದೇ ಚಕಾರ ಎತ್ತದೆ ಸುಮ್ಮನಿದ್ದಾರೆ. ರೇವಣ್ಣವರ ಈ ವರ್ತನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು. ಹಾಸನಾಂಬೆ ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕೊಡುವ ಅಧಿದೇವತೆಯ ದೇವಸ್ಥಾನದ ಬಾಗಿಲು ತೆರೆಯಲು ದಿನಗಣನೆ ಆರಂಭವಾಗಿದೆ. ತಾಯಿಯ ದರ್ಶನ ಪಡೆಯಲು ಪ್ರತಿವರ್ಷವೂ ರಾಜ್ಯದಿಂದ ಮಾತ್ರವಲ್ಲೇ ಹೊರರಾಜ್ಯಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಬರ್ತಾರೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಇಷ್ಟಾರ್ಥ ಸಿದ್ಧಿಗಾಗಿ ಅಮ್ಮನ ದರ್ಶನ ಪಡೆಯುತ್ತಾರೆ. ಕಳೆದ ವರ್ಷ ಹಾಸನಾಂಬೆಯ ನೇರ ದರ್ಶನಕ್ಕೆ 1,000 ರೂಪಾಯಿ ಟಿಕೆಟ್ ದರ ನಿಗದಿಪಡಿಸಲಾಗಿತ್ತು. ಆಗ ಶಾಸಕರಾಗಿದ್ದ ಹೆಚ್.ಡಿ. ರೇವಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಾರಿಯೂ ಹಾಸನಾಂಬೆ ವಿಶೇಷ ದರ್ಶನಕ್ಕೆ ಸಾವಿರ ರೂಪಾಯಿ ಫಿಕ್ಸ್ ಆಗಿದ್ದು, ರೇವಣ್ಣ ಫುಲ್ ಸೈಲೆಂಟ್ ಆಗಿದ್ದಾರೆ. ಈ ಬಾರಿ ಜನಸಾಮಾನ್ಯರಿಗೆ ಹೊರೆ ಆಗಲ್ವಾ? ಅಧಿಕಾರದಲ್ಲಿ ಇದ್ದಾಗ ಒಂದು ರೀತಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಒಂದು ವರ್ತಿಸೋದು ಎಷ್ಟು ಸರಿ ಅಂತ ಜನ ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಸುಗಮವಾಗಿ ದೇವಿ ದರ್ಶನ ಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಇನ್ನೈದು ದಿನದಲ್ಲಿ ದೇಗುಲದ ಬಾಗಿಲು ತೆರೆಯಲಿದ್ದು, ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರಿಗೂ ಆಹ್ವಾನ ನೀಡಲಾಗಿದೆ. ಹೀಗಾಗಿ ಕುಟುಂಬಸ್ಥರೆಲ್ಲಾ ದೇವಿ ದರ್ಶನಕ್ಕೆ ಆಗಮಿಸಿದ್ರೆ ಸಾಮಾನ್ಯ ಭಕ್ತರಿಗೆ ತೊಂದರೆಯಾಗುತ್ತೆ. ಹೀಗಾಗಿ ನಿಗದಿ ಮಾಡಿದ ಸಮಯದಲ್ಲಿ ಮಾತ್ರವೇ ವಿಐಪಿಗಳಿಗೆ ಅವಕಾಶ ನೀಡಬೇಕು ಅನ್ನೋದು ಭಕ್ತ ಸಮೂಹದ ಒತ್ತಾಯವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply