ಕ್ಯಾಷಿಯರ್ ಗಮನ ಬೇರೆಡೆ ಸೆಳೆದು 15 ಲಕ್ಷ ರೂ. ಕಳ್ಳತನ!

ಮಂಡ್ಯ: ಅಪರಿಚಿತ ಗುಂಪೊಂದು ಬ್ಯಾಂಕ್ ಸಿಬ್ಬಂದಿಯ ಗಮನ ಬೇರೆಡೆ ಸೆಳೆದು 15 ಲಕ್ಷ ರೂ. ನಗದು ಹಣವನ್ನು ಕಳ್ಳತನ ಮಾಡಿರುವ ಘಟನೆ ಮಂಡ್ಯ ನಗರದಲ್ಲಿರುವ ಎಸ್‍ಬಿಐ ಬ್ಯಾಂಕ್‍ನಲ್ಲಿ ನಡೆದಿದೆ.

ಬ್ಯಾಂಕ್‍ನ ಒಳಗಡೆ ಬಂದ ಅಪರಿಚಿತರ ಗುಂಪು ಕ್ಯಾಷಿಯರ್ ಜೊತೆ ಮಾತುಕತೆಯಲ್ಲಿ ತೊಡಗಿದ್ದಾರೆ. ಈ ವೇಳೆ ಕ್ಯಾಷಿಯರ್ ಗಮನಕ್ಕೆ ಬಾರದಂತೆ 15 ಲಕ್ಷ ರೂ. ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ವಲ್ಪ ಸಮಯದ ನಂತರ ಕ್ಯಾಷಿಯರ್‍ಗೆ ಹಣ ಕಳೆದುಕೊಂಡಿರುವುದು ಗಮನಕ್ಕೆ ಬಂದಿದೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *